ಎಕ್ಸಿಟ್ ಪೋಲ್ ಸರಿಯಾಗಿರುವುದಿಲ್ಲ, ಬಿಜೆಪಿಗೆ ಸ್ಪಷ್ಟ ಬಹುಮತ ಪಕ್ಕಾ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎಕ್ಸಿಟ್ ಪೋಲ್​ಗಳು ಶೇ 100ರಷ್ಟು ಸರಿಯಾಗಿ ಇರುವುದಿಲ್ಲ .ಅದ್ರ ಕುರಿತು ತಲೆಕೆಡಿಸಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ತಮ್ಮ ವಿಧಾನಸಭಾ ಕ್ಷೇತ್ರ ಶಿಗ್ಗಾಂವಿ ಪಟ್ಟಣದಲ್ಲಿ ಬುಧವಾರ ಸಂಜೆ ಮಾತನಾಡಿದ ಅವರು, ಮತಗಟ್ಟೆ ಸಮೀಕ್ಷೆಗಳು (Exit Poll) ಪೂರ್ಣವಾಗಿ ಸರಿಯಾಗಿರುತ್ತವೆ ಎನ್ನಲಾಗದು. ನಿಜವಾದ ಫಲಿತಾಶ ಬರುವಾಗ ಪ್ಲಸ್ ಇರುವುದು ಮೈನಸ್, ಮೈನಸ್ ಇರುವುದು ಪ್ಲಸ್ ಆಗುತ್ತದೆ. ರಾಜ್ಯದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಎಕ್ಸಿಟ್ ಪೋಲ್ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿಗೆ ಬಹುಮತ ಸಿಗುತ್ತದೆ. ಹಾಗಾಗಿ ಯಾವುದೇ ರೆಸಾರ್ಟ್ ರಾಜಕೀಯ ಮಾಡಬೇಕಾದ ಪ್ರಶ್ನೆಯೇ ಇರುವುದಿಲ್ಲ. ಮೇ 13 ರ ಫಲಿತಾಂಶ ಬರುವ ತನಕ ಕಾದು ನೋಡಿ ಎಂದು ಅವರು ಹೇಳಿದ್ದಾರೆ.

ನಾವೇ ಕಿಂಗ್ ಆಗ್ತೇವೆ. ಜೆಡಿಎಸ್ ಕಿಂಗ್ ಮೇಕರ್ ಆಗುವುದಿಲ್ಲ. ಬಿಜೆಪಿಗೆ ಸಂಪುರ್ಣ ಬಹುಮತ ಸಿಗುವ ವಿಶ್ವಾಸ ಇದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಈ ಮಧ್ಯೆ, ಶಿಗ್ಗಾಂವಿ ಕ್ಷೇತ್ರದ ಕಾರ್ಯಕರ್ತರಿಗೆ ಅವರು ಧನ್ಯವಾದ ತಿಳಿಸಿದರು. ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೆ ಬಾರಿ ಆಯ್ಕೆ ಮಾಡಲು ಶ್ರಮಿಸಿದವರಿಗೆ ಧನ್ಯವಾದ ತಿಳಿಸಿ ಕಾರ್ಯಕರ್ತರ ಜೊತೆ ಫೋಟೋ ತೆಗಿಸಿಕೊಂಡು ಸಂತಸದಿಂದ ಕೈ ಕುಲುಕಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!