ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪಕ್ಷವು 76-90 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆಯು ಹೇಳಿದೆ.
ಈಗಾಗಲೇ ಚುನಾವಣೆ ಮುಕ್ತಾಯವಾಗಿದ್ದು, ಗೆಲುವಿನ ಲೆಕ್ಕಾಚಾರ ಶುರುವಾಗಿದೆ.
ಪಂಜಾಬ್ ನ ಟ್ಟು 117 ವಿಧಾನಸಭೆ ಕ್ಷೇತ್ರಗಳಲ್ಲಿ ಎಎಪಿ ಪಕ್ಷವು 76-90 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ 19-31 ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ.
7-11 ಸ್ಥಾನಗಳಲ್ಲಿ ಶಿರೋಮಣಿ ಅಕಾಲಿದಳವು ಜಯ ಗಳಿಸಲಿದೆ. ಇನ್ನುಳಿದಂತೆ ಬಿಜೆಪಿಯು 1-4 ರಷ್ಟು ಸ್ಥಾನದಲ್ಲಿ ಮಾತ್ರ ವಿಜಯ ಸಾಧಿಸಲಿದೆ ಎಂದು ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆ ಹೇಳಿದೆ.