ಪ್ರವಾದಿ ಬಗ್ಗೆ ಹೇಳಿಕೆ ಖಂಡಿಸಿ ಪ್ರತಿಭಟಿಸಿದ ವಲಸಿಗರು ಕುವೈತ್‌ನಿಂದ ಗಡಿಪಾರು; ʼಪುಂಡರನ್ನುʼ ಭಾರತದಿಂದ ಹೊರದಬ್ಬಲು ಕೇಳಿಬಂತು ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಕುರಿತು ನೀಡಿದ್ದ ಹೇಳಿಕೆಗಳನ್ನು ಮುಂದಿಟ್ಟುಕೊಂಡು ಫಹಾಹಿಲ್‌ ನಗರದಲ್ಲಿ ಪ್ರತಿಭಟನೆ ನಡೆಸಿದ ವಲಸಿಗರನ್ನು ಗಡಿಪಾರು ಮಾಡುವುದಾಗಿ ಕುವೈತ್ ಹೇಳಿದೆ. ದೇಶದ ಕಾನೂನು ಉಲ್ಲಂಘಿಸಿ ಧರಣಿ ನಡೆಸಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಕುವೈತ್‍ನಲ್ಲಿರುವ ಎಲ್ಲಾ ಅನಿವಾಸಿಗಳು ಕುವೈತ್ ಕಾನೂನುಗಳನ್ನು ಗೌರವಿಸಬೇಕು. ಯಾವುದೇ ಅನಿವಾಸಿಗಳು ಕುವೈತ್‍ನಲ್ಲಿ ಪ್ರತಿಭಟನೆ ನಡೆಸುವಂತಿಲ್ಲ ಎಂಬ ಕಾನೂನಿದೆ. ಆದರೆ ಇದನ್ನು ಉಲ್ಲಂಘಿಸಿದಕ್ಕೆ ಗಡಿಪಾರು ಮಾಡಲಾಗುತ್ತದೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
ಅಧಿಕಾರಿಗಳು “ವಲಸಿಗರನ್ನು ಬಂಧಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ಅವರನ್ನು ಶೀಘ್ರವಾಗಿ ಅವರ ದೇಶಗಳಿಗೆ ಗಡೀಪಾರು ಮಾಡಲು ಗಡೀಪಾರು ಕೇಂದ್ರಗಳಿಗೆ ಕಳುಹಿಸುತ್ತಾರೆ” ಎಂದು ಅರಬ್ ಟೈಮ್ಸ್ ವರದಿ ಮಾಡಿದೆ. ಈ ವಲಸಿಗರು ಮತ್ತೆ ಕುವೈತ್‌ಗೆ ಪ್ರವೇಶಿಸುವುದನ್ನು ನಿಷೇಧಿಸಲಾಗುವುದು ಎಂದು ಅದು ಹೇಳಿದೆ.

ಕುವೈತ್‌ ಕಠಿಣ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದು. ಭಾರತದಲ್ಲಿ ಕಲ್ಲುತೂರಾಟ- ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿಕೊಂಡಿರುವ ಪುಂಡರನ್ನು ಭಾರತದಿಂದ ಹೊರದಬ್ಬಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹ ಕೇಳಿಬರುತ್ತಿದೆ. ಪ್ರತಿಬಟನೆ ಹೆಸರಿನಲ್ಲಿ ಕೋಮುಗಲಭೆ, ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕರ ಆಸ್ತಿಪಾಸ್ತಿಗೆ ನಷ್ಟವುಂಟು ಮಾಡಿದ ಮತಾಂಧರನ್ನು ದೇಶದಿಂದ ಗಡಿಪಾರು ಮಾಡುವಂತೆ ಒತ್ತಾಯಗಳು ಕೇಳಿಬರುತ್ತಿವೆ.

ದೇಶದೊಳಗೆ ಅಕ್ರಮವಾಗಿ ನುಸುಳುತ್ತಿರುವ ರೋಹಿಂಗ್ಯಾ, ಬಾಂಗ್ಲಾ ವಲಸಿಗರು ಹಿಂಸಾಕೃತ್ಯಗಳಲ್ಲಿ ತೊಡಗಿದ್ದು ಅವರನ್ನು ದೇಶದಿಂದ ಹೊರಗಟ್ಟಬೇಕು. ದೇಶದೊಳಗೆ ಅರಾಜಕತೆ ಸೃಷ್ಟಿಸುವ ಯತ್ನ ನಡೆಸುತ್ತಿರುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!