ಅಂತರಾಷ್ಟ್ರೀಯ ಮಟ್ಟದಲ್ಲಿ ರಾಹುಲ್‌ ಗಾಂಧಿ ಅನರ್ಹತೆಯ ಚರ್ಚೆ, ಏನೆಂದಿತು ಜರ್ಮನಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಹುಲ್ ಗಾಂಧಿ ವಿಚಾರ ರಾಷ್ಟ್ರಮಟ್ಟದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಹುಲ್ ಗಾಂಧಿ ಅವರ ಅನರ್ಹತೆ ಪ್ರಕರಣದ ಬೆಳವಣಿಗೆಗಳ ಮೇಲೆ ನಿಗಾ ಇಡುವುದಾಗಿ ಅಮೆರಿಕ ಘೋಷಿಸಿದ್ದು, ಜರ್ಮನಿ ಕೂಡ ಪ್ರತಿಕ್ರಿಯಿಸಿದೆ. ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ನಂತರ ಲೋಕಸಭೆಯಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿಗೆ “ಪ್ರಜಾಪ್ರಭುತ್ವದ ಮೂಲ ತತ್ವಗಳು” ಅನ್ವಯಿಸುತ್ತವೆ ಎಂದು ಜರ್ಮನಿ ಹೇಳಿದೆ.

“ಭಾರತದಲ್ಲಿ ವಿರೋಧ ಪಕ್ಷದ ರಾಜಕಾರಣಿ ರಾಹುಲ್ ಗಾಂಧಿಗೆ ಜೈಲು ಶಿಕ್ಷೆ, ಆ ತೀರ್ಪಿನಿಂದಾಗಿ ಲೋಕಸಭೆಯಲ್ಲಿ ಅವರ ಸದಸ್ಯತ್ವ ರದ್ದತಿ ಮುಂತಾದ ವಿಷಯಗಳನ್ನು ಗಮನಿಸುತ್ತಿದ್ದೇವೆ. ಆದರೆ, ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಸ್ಥಿತಿಯಲ್ಲಿದ್ದಾರೆ. ಯಾವ ಆಧಾರದ ಮೇಲೆ ಅವರನ್ನು ಅನರ್ಹಗೊಳಿಸಲಾಗಿದೆ ಎಂಬುದು ಸ್ಪಷ್ಟವಾಗಲಿದೆ. “ನ್ಯಾಯಾಂಗ ಸ್ವಾತಂತ್ರ್ಯದ ಮಾನದಂಡಗಳು ಮತ್ತು ಪ್ರಜಾಪ್ರಭುತ್ವದ ಮೂಲ ತತ್ವಗಳು ಈ ಪ್ರಕರಣಕ್ಕೆ ಅನ್ವಯಿಸುತ್ತವೆ ಎಂದು ನಾವು ನಂಬುತ್ತೇವೆ” ಎಂದು ದೇಶದ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಬಲಪಡಿಸಲು ಭಾರತದೊಂದಿಗೆ ಕೆಲಸ ಮಾಡಲು ಅಮೆರಿಕ ಕೂಡ ಬದ್ಧವಾಗಿರುವುದಾಗಿ ಘೋಷಿಸಿದೆ.  “ಕಾನೂನಿನ ಆಡಳಿತ ಮತ್ತು ನ್ಯಾಯಾಂಗವನ್ನು ಗೌರವಿಸುವುದು ಪ್ರಜಾಪ್ರಭುತ್ವದ ಮೂಲಾಧಾರ”ಎಂದು ಯುಎಸ್ ಡಿಪಾರ್ಟ್ಮೆಂಟ್ ಆಫ್ ಸ್ಟೇಟ್ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!