ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯನ್ನು ಸದಾ ವಿರೋಧಿಸುವ ಸಂಸದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಿಜಯೇಂದ್ರ ಬಣ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಅವರದ್ದು ಮುಖವಾಡದ ಹಿಂದುತ್ವ ಎಂದು ಮೈಸೂರಿನಲ್ಲಿ ಪಕ್ಷದ ಕಾರ್ಯಕರ್ತರು, ವಿಜಯೇಂದ್ರ ಬಣದ ನಾಯಕರು ಆಗ್ರಹಿಸಿದ್ದಾರೆ.
ಬಿಜೆಪಿಯೊಂದಿಗೆ ಪ್ರತ್ಯೇಕ ಹೋರಾಟ ನಡೆಸುತ್ತಿರುವ ಯತ್ನಾಳ್ ಅವರ ನಡೆಯ ವಿರುದ್ಧ ಮೈಸೂರಿನಲ್ಲಿ ನಡೆದ ರ್ಯಾಲಿ ವಿರುದ್ಧ ವಿಜಯೇಂದ್ರ ಅವರ ಕಾರ್ಯಕರ್ತರ ಬಣ ಆಕ್ರೋಶ ವ್ಯಕ್ತಪಡಿಸಿದೆ.
ಇಷ್ಟು ದಿನ ತಾಳ್ಮೆ ವಹಿಸಿದ್ದ ವಿಜಯೇಂದ್ರ ಬಣದ ಕಾರ್ಯಕರ್ತರು ಇಂದು ಮೈಸೂರಿನಲ್ಲಿ ನಡೆದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ವಿಜಯೇಂದ್ರ ಬಣದ ಮುಖಂಡರು ಸುದ್ದಿಗೋಷ್ಠಿ ನಡೆಸಿದ ಸಂದರ್ಭದಲ್ಲಿ ಕಾರ್ಯಕರ್ತರು ರೋಷಾವೇಶಗೊಂಡಿದ್ದರು. ಭಾರೀ ಹೈಡ್ರಾಮಾವೇ ನಡೆಯಿತು. ಯತ್ನಾಳ್ ಉಚ್ಚಾಟನೆಗೆ ತೀವ್ರ ಆಕ್ರೋಶ ವ್ಯಕ್ತವಾಯಿಗಿದೆ.