ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಂಗಭದ್ರಾ ಜಲಾಶಯವನ್ನು ರಾಜ್ಯ ಸರ್ಕಾರ ನಿರ್ವಹಣೆ ಮಾಡುತ್ತಿಲ್ಲ. ಇದಕ್ಕಾಗಿ ಪ್ರತ್ಯೇಕ ಸಮಿತಿ ಇದೆ. ಆದರೆ, ನಾವು ಸದಸ್ಯರಾಗಿದ್ದು, ನಾಲ್ಕೈದು ದಿನಗಳಲ್ಲಿ ಗೇಟ್ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಡಿಕೆಶಿ ಭರವಸೆ ನೀಡಿದರು.
ತುಂಗಭದ್ರಾ ಅಣೆಕಟ್ಟೆಗೆ ಭೇಟಿ ನೀಡಿದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಣೆಕಟ್ಟೆಗೆ ತೆರಳಿ ವೀಕ್ಷಣೆ ಮಾಡಿ ತಕ್ಷಣ ಕ್ರಮ ಕೈಗೊಂಡಿದ್ದೇವೆ, ಎಲ್ಲ ಗುತ್ತಿಗೆದಾರರ ಜತೆ ಮಾತನಾಡಿದ್ದೇನೆ. ದುರಸ್ತಿ ಕಾರ್ಯವು 4-5 ದಿನಗಳಲ್ಲಿ ಪೂರ್ಣಗೊಳ್ಳುತ್ತದೆ.
ರೈತರ ಉತ್ಪನ್ನಗಳ ರಕ್ಷಣೆಗೆ ಕ್ರಮ ಕೈಗೊಂಡಿದ್ದೇವೆ. ನಾಳೆ (ಆ.13) ಸಿಎಂ ಹೋಗ್ತಾರೆ. ತಾಂತ್ರಿಕ ತಂಡದೊಂದಿಗೆ ಮಾತನಾಡಿದ್ದೇನೆ. ಯಾರೂ ಗಾಬರಿಯಾಗಬಾರದು ಎಂದು ಹೇಳಿದ್ದಾರೆ.