ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಅಗತ್ಯ ಔಷಧಗಳ ರಾಷ್ಟ್ರೀಯ ಪಟ್ಟಿ (NLEM)ಯನ್ನು ತುರ್ತಾಗಿ ಪರಿಷ್ಕರಿಸುವಂತೆ ಆರೋಗ್ಯ ತಜ್ಞರು, ಸಂಶೋಧಕರು ಹಾಗೂ ನಾಗರಿಕ ಸಂಘಟನೆಗಳ ಒಕ್ಕೂಟ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಪ್ರಸ್ತುತ ಪಟ್ಟಿಯಲ್ಲಿ ಕ್ಯಾನ್ಸರ್, ಮಧುಮೇಹ ಸೇರಿದಂತೆ ಹಲವು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಅಗತ್ಯವಾದ ಪ್ರಮುಖ ಔಷಧಗಳು ಸೇರಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಪರಿಷ್ಕರಣೆ ವಿಳಂಬದಿಂದ ರೋಗಿಗಳಿಗೆ ತೊಂದರೆ
ಈ ಕುರಿತು ಕೇಂದ್ರ ಆರೋಗ್ಯ ಸಚಿವರು ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಪತ್ರ ಬರೆದಿರುವ ಒಕ್ಕೂಟ, ಅಗತ್ಯ ಔಷಧಗಳ ಪಟ್ಟಿಯನ್ನು ನವೀಕರಿಸಿದರೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ರೋಗಿಗಳಿಗೆ ಜೀವ ರಕ್ಷಕ ಔಷಧಗಳು ಸುಲಭವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ಲಭ್ಯವಾಗಲಿವೆ ಎಂದು ತಿಳಿಸಿದೆ.
ಇದನ್ನೂ ಓದಿ:
ಪರಿಷ್ಕರಣೆ ವಿಳಂಬದಿಂದ ರೋಗಿಗಳಿಗೆ ತೊಂದರೆ
ವಿಶ್ವ ಆರೋಗ್ಯ ಸಂಸ್ಥೆ (WHO) ತನ್ನ ಅಗತ್ಯ ಔಷಧಗಳ ಪಟ್ಟಿಯನ್ನು 2023 ಮತ್ತು 2025ರಲ್ಲಿ ನವೀಕರಿಸಿದ್ದರೂ, ಭಾರತದ NLEM ಪಟ್ಟಿಯನ್ನು 2022ರ ಬಳಿಕ ಪರಿಷ್ಕರಿಸಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ವಿಳಂಬದಿಂದ ಲಕ್ಷಾಂತರ ರೋಗಿಗಳ ಚಿಕಿತ್ಸೆಯ ಮೇಲೂ ಪರಿಣಾಮ ಬೀಳುವ ಸಾಧ್ಯತೆ ಇದೆ ಎಂದು ಒತ್ತಿಹೇಳಲಾಗಿದೆ.



