ಶಿಕ್ಷಣ ಪಡೆದರೆ ಶೋಷಣೆ, ದೌರ್ಜನ್ಯ ನಿಲ್ಲಲು ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಗಂತ ವರದಿ, ರಾಯಚೂರು :

ಜಾತಿ ವ್ಯವಸ್ಥೆಯನ್ನು ಯಾರು ಮಾಡಿದರೋ ಅವರೆ ಜಾತಿಯಾಧಾರಿತ ಸಮಾವೇಶಗಳನ್ನು ಮಾಡಬಾರದೆಂದು ಹೇಳುತ್ತಾರೆ. ಅಂತಹವರ ಕುರಿತು ಬಹಳ ಎಚ್ಚರವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್‌ದಲ್ಲಿನ ಕನಕಗುರು ಪೀಠದ ಶಖಾಮಠದಲ್ಲಿ ಆಯೋಜಿಸಿದ್ದ ಹಾಲುಮತ ಸಂಸ್ಕೃತಿ ವೈಭವ ಸಮಾರಂಭದ ೨ನೇ ದಿನದ ಕಾರ್ಯಕ್ರಮದಲ್ಲಿ ಹಾಲುಮತ ಭಾಸ್ಕರ ಮತ್ತು ಕನಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಜಾತಿ ವ್ಯವಸ್ಥೆಯನ್ನು ಹಾಗೂ ಚತುವರ್ಣ ವ್ಯವಸ್ಥೆಯನ್ನು ಮಾಡಲಿಲ್ಲ . ಕೆಲವರು ತಮ್ಮ ಸ್ವಾರ್ಥಕ್ಕಾಗಿ ಈ ವ್ಯವಸ್ಥೆಯನ್ನು ಮಾಡಿದರು ಇಂತಹವರ ಕುರಿತು ಜಾಗೃತವಾಗಿರಬೇಕು ಎಂದರು.

ಸಮಾಜದಲ್ಲಿ ಯಾರು ವಂಚಿತರಾಗಿರುವರೋ ಅವರು ಹಿಂದುಳಿದವರಾಗಿದ್ದರೆ ಅವಕಾಶ ದೊರೆತವರು ಮುಂದುವರೆದವರಾಗಿದ್ದಾರೆ. ಶಿಕ್ಷಣ ಇದ್ದರೆ ಮಾತ್ರ ಸ್ವಾಭಾನದಿಂದ ಬದುಕಲು ಸಾಧ್ಯ. ಶಿಕ್ಷಣ ಪಡೆದರೆ ಮಾತ್ರ ಶೋಷಣೆ, ದೌರ್ಜನ್ಯ ನಿಲ್ಲಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಇತಿಹಾಸ ಅರಿಯದವರು ಭವಿಷ್ಯವನ್ನು ರೂಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಎಲ್ಲರೂ ತಮಗೆ ಸಂಬoಧಿಸಿದ ಇತಿಹಾಸವನ್ನು ಅರಿತುಕೊಳ್ಳುವುದಕ್ಕೆ ಮೊದಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಹಿಂದೆ ಏನಾಗಿದ್ದೆವು, ಮುಂದೇನಾಗಬೇಕು ಎಂದು ಚರ್ಚೆಗಳಾಗಲು ಇಂಥ ಸಮಾವೇಶಗಳು ಅಗತ್ಯ. ರಾಜಕೀಯ ಚಿಂತಕ ಲೋಹಿಯಾ ಮುಂದುವರೆದ ಜಾತಿ ಜಾತಿ ಸಮಾವೇಶ ಮಾಡಿದರೆ ಅದು ಜಾತಿ ಸಮಾವೇಶವಾಗುತ್ತದೆ. ಹಿಂದುಳಿದ ವರು, ಶೋಷಣೆಗೆ ಒಳಪಟ್ಟವರು ಸಂಘಟನೆಗಾಗಿ ಸಮಾವೇಶ ಮಾಡಿದರೆ ಅದು ಜಾತಿ ಸಮಾವೇಶ ಆಗುವುದಿಲ್ಲ ಎಂದಿದ್ದಾರೆ ಎಂದರು.

ಅಕ್ಷರ ಸಂಸ್ಕೃತಿಯಿoದ ವಂಚಿತರಾದವರು ಶೂದ್ರರಾದರು. ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು. ಇದರ ಲಾಭ ಪಡೆದವರು ಈಗಲೂ ಆ ಪ್ರಯತ್ನ ವನ್ನು ಮಾಡುತ್ತಿದ್ದಾರೆ. ಶೋಷಣೆಗೆ ಒಳಪಟ್ಟವರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು . ಕುರುಬರೂ ಇದರಲ್ಲಿ ಸೇರಿದ್ದಾರೆ ಎಂದರು.

ಶಿಕ್ಷಣ, ಸಂಘಟನೆ, ಹೋರಾಟ ಈ ಮೂರೂ ಮಂತ್ರಗಳನ್ನು ಹಿಂದುಳಿದವರಿಗೆ, ಶೋಷಿತರಿಗೆ ಅಂಬೇಡ್ಕರ್ ಕೊಟ್ಟಿದ್ದಾರೆ. ಸಂಘಟನೆ ಮಾಡಿ ಚರ್ಚೆ ಮಾಡದೆ ಹೋದರೆ ಹೋರಾಟ ಮಾಡಲು ಸಾಧ್ಯವಿಲ್ಲ. ಶಿಕ್ಷಣ ಇಲ್ಲದಿದ್ದರೆ ಸಂಘಟನೆ ಹೇಗೆ ಮಾಡಲು ಸಾಧ್ಯ. ಅದಕ್ಕೆ ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು ಎಂದು ತಿಳಿಸಿದರು.

ವೇದಿಕೆಯಲ್ಲಿ ಶಿವಾನಂದ ಸ್ವಾಮೀಜಿ, ಅಭಿನವ ಪುಂಡಲಿoಗ ಸ್ವಾಮೀಜಿ, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವರಾದ ಎನ್.ಎಸ್.ಬೋಸರಾಜು, ಭೈರತಿ ಸುರೇಶ, ಶಾಸಕರಾದ ಬಸನಗೌಡ ದದ್ದಲ್, ಕರೆಮ್ಮ ನಾಯಕ್, ಹಂಪಯ್ಯ ನಾಯಕ, ನರೇಂದ್ರಸ್ವಾಮಿ, ವಿ.ಪಸದಸ್ಯ ಹೆಚ್.ವಿಶ್ವನಾಥ,ಪ್ರಶಸ್ತಿ ಪುರಸ್ಕೃತರು ಸೇರಿದಂತೆ ಇತರರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!