Monday, December 15, 2025

ಪಾಕಿಸ್ತಾನದ ಪಂಜಾಬ್‌ನ ಬಾಯ್ಲರ್ ಕಾರ್ಖಾನೆಯಲ್ಲಿ ಸ್ಫೋಟ: 15 ಜನರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಶುಕ್ರವಾರ ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ 15 ಜನ ಸಾವನ್ನಪ್ಪಿದ್ದು, ಮತ್ತು ಹಲವರು ಗಾಯಗೊಂಡಿ ಘಟನೆ ನಡೆದಿದೆ.

ಈ ಘಟನೆ ಪಂಜಾಬ್‌ನ ಫೈಸಲಾಬಾದ್ ಜಿಲ್ಲೆಯಲ್ಲಿ ಬೆಳಿಗ್ಗೆ ನಡೆದಿದ್ದು, ಇದು ಲಾಹೋರ್‌ನಿಂದ ಸುಮಾರು 130 ಕಿ.ಮೀ ದೂರದಲ್ಲಿದೆ.

ಫೈಸಲಾಬಾದ್ ಜಿಲ್ಲಾಧಿಕಾರಿ ರಾಜಾ ಜಹಾಂಗೀರ್ ಅನ್ವರ್ ಸುದ್ದಿಗಾರರೊಂದಿಗೆ ಮಾತನಾಡಿ, ಮಲಿಕ್‌ಪುರ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್‌ನ ಪ್ರಬಲ ಸ್ಫೋಟದಿಂದಾಗಿ ಕಟ್ಟಡ ಸೇರಿದಂತೆ ಹತ್ತಿರದಲ್ಲಿರೋ ಇತರ ಕಟ್ಟಡಗಳು ಕುಸಿದಿವೆ ಎಂದು ಹೇಳಿದ್ದಾರೆ.

ಇಲ್ಲಿಯವರೆಗೆ, ರಕ್ಷಣಾ ತಂಡಗಳು ಅವಶೇಷಗಳ ಅಡಿಯಿಂದ 15 ಮೃತ ದೇಹಗಳನ್ನು ಹೊರತೆಗೆದಿದ್ದು ಇನ್ನೂ ಹೆಚ್ಚಿನ ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಏಳು ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!