ಪಟಾಕಿ ತಯಾರಿಕಾ ಮನೆಯಲ್ಲಿ ಸ್ಫೋಟ: ಮಹಿಳೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಟಾಕಿ ತಯಾರಿಸುವ ಗನ್ ಪೌಡರ್ ಗೆ ಬೆಂಕಿ ತಗುಲಿ ಸ್ಫೋಟ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿದ್ದು, ಯುವಕ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ.
ಸ್ಫೋಟದಿಂದಾಗಿ ಮನೆಯ ಛಾವಣಿ ಕುಸಿದಿದ್ದು, ಇದರಿಂದ ಓರ್ವ ಮಹಿಳೆ ಮೃತಪಟ್ಟಿದ್ದು, ಯುವಕ ಗಾಯಗೊಂಡಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಧಾವಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತ ಗಾಯಗೊಂಡ ವ್ಯಕ್ತಿಯನ್ನು ಅವರನ್ನು ಚಿಕಿತ್ಸೆಗಾಗಿ ಲಕ್ನೋಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!