ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಫಾರೂಕಾಬಾದ್‌ನ ಕೋಚಿಂಗ್ ಸೆಂಟರ್‌ನಲ್ಲಿ ಶನಿವಾರ ಭೀಕರ ಸ್ಫೋಟವೊಂದು ಸಂಭವಿಸಿದ್ದು, ಕನಿಷ್ಠ ಇಬ್ಬರು ಮೃತಪಟ್ಟು, 7 ಮಂದಿ ಗಾಯಗೊಂಡಿದ್ದಾರೆ.
ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಅತಿಯಾದ ಮೀಥೇನ್ ಗ್ಯಾಸ್ ಶೇಖರಣೆಯಾಗಿ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ .
ಗಾಯಗೊಂಡವರನ್ನು ಲೋಹಿಯಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸುವಂತೆ ಮತ್ತು ಗಾಯಾಳುಗಳಿಗೆ ತ್ವರಿತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸ್ಫೋಟವನ್ನು ʼದುರಂತʼ ಎಂದು ಕರೆದ ಅವರು ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಿದ್ದಾರೆ. ದುರಂತದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆದೇಶವನ್ನೂ ಹೊರಡಿಸಿದ್ದಾರೆ. ಸಂತ್ರಸ್ತರು ಮತ್ತು ಗಾಯಗೊಂಡವರಿಗೆ ಎಲ್ಲ ರೀತಿಯ ನೆರವು ನೀಡಿವುದಾಗಿ ಘೋಷಿಸಿದ್ದಾರೆ. ಅವರ ಸೂಚನೆ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.