September 29, 2026
Tuesday, September 29, 2026
spot_img

ಕೃಷಿ ಹೊಂಡದಲ್ಲಿ ಸ್ಫೋಟ ಕೇಸ್‌ ರದ್ದು: ಕಣ್ಣೀರಿಡುತ್ತಾ ವಿಡಿಯೋ ಮಾಡಿದ ಡ್ರೋನ್‌ ಪ್ರತಾಪ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಎಸೆದು ಸ್ಫೋಟಿಸಿದ ಪ್ರಕರಣದಲ್ಲಿ ಕನ್ನಡದ ಬಿಗ್​ಬಾಸ್​ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ ವಿಚಾರವಾಗಿ ಡ್ರೋನ್‌ ಪ್ರತಾಪ್‌ ವಿಡಿಯೋ ಅಪ್‌ಲೋಡ್‌ ಮಾಡಿದ್ದಾರೆ. ಭಾವುಕರಾಗಿ ಮಾತನಾಡಿ, ಗೌರವಾನ್ವಿತ ಕೋರ್ಟ್‌ಗೆ ತಲೆಬಾಗುತ್ತೇನೆ ಎಂದು ಹೇಳಿದ್ದಾರೆ.

ಕೃಷಿ ಹೊಂಡದಲ್ಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಾಗಿದ್ದ ಪ್ರತಾಪ್, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಪ್ರತಾಪ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಪ್ರಯೋಗದ ಉದ್ದೇಶ ಶೈಕ್ಷಣಿಕವಾಗಿದ್ದು, ಯಾವುದೇ ದುರುದ್ದೇಶ ಕಂಡುಬಂದಿಲ್ಲ ಎಂದು ಹೇಳಿ, ಎಫ್ಐಆರ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಈ ತೀರ್ಪಿನ ಬಳಿಕ ಡ್ರೋನ್ ಪ್ರತಾಪ್ ವಿಡಿಯೋ ಮಾಡಿ ಭಾವುಕರಾಗಿ ಮಾತನಾಡಿದ್ದು, ಹಲವು ದಿನಗಳಿಂದ ಎದುರಿಸುತ್ತಿದ್ದ ಕಾನೂನು ಹೋರಾಟಕ್ಕೆ ಇದೀಗ ಒಂದು ರೀತಿಯ ನೆಮ್ಮದಿ ಸಿಕ್ಕಿದೆ ಎಂದು ಹೇಳಿದ್ದಾರೆ. ಕಣ್ಣೀರಿಡುತ್ತಲೇ ಹೈಕೋರ್ಟ್‌ಗೆ ಗೌರವ ಸಲ್ಲಿಸಿದ ಪ್ರತಾಪ್, ತಮ್ಮ ಪರವಾಗಿ ಕಾನೂನು ಹೋರಾಟ ನಡೆಸಿದ ವಕೀಲರಿಗೆ ಮತ್ತು ಅವರ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಎಲ್ಲಾ ಕೇಸ್‌ಗಳಿಂದ ಮುಕ್ತಗೊಳಿಸಲಾಗಿದೆ. ನನ್ನ ವಿರುದ್ಧ ಹೇಳಬಾರದ್ದನ್ನೆಲ್ಲ ಹೇಳಿದರು. ಏನೇನೋ ಬರೆದರು. ಕೊನೆಗೂ ದೇವರು ಕಣ್ಣುಬಿಟ್ಟ. ನನಗೆ ಜಯ ಸಿಕ್ಕಿದೆ ಎಂದು ಡ್ರೋನ್ ಪ್ರತಾಪ್ ಹೇಳಿದ್ದಾರೆ.

Must Read