ಹೊಸದಿಗಂತ ಡಿಜಿಟಲ್ ಡೆಸ್ಕ್:
ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಬ್ಲಾಸ್ಟ್ ಆಗಿದೆ. ಇಬ್ಬರು ಯುವಕರು ವಾಸವಿದ್ದ ಮನೆ ಬ್ಲಾಸ್ಟ್ ಆಗಿದೆ.
ಓರ್ವನಿಗೆ ಗಾಯ, ಮತ್ತೊಬ್ಬನಿಗೆ ತಲೆ-ಕೈಕಾಲುಗಳಿಗೆ ಪೆಟ್ಟು ಬಿದ್ದಿದೆ. ಸ್ಫೋಟಕ್ಕೆ ಕಾರಣ ಏನು ಅನ್ನೋದು ಇನ್ನು ತಿಳಿದು ಬಂದಿಲ್ಲ.
ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಗ್ಗೆ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಗಾಬರಿಯಾಗಿದ್ದಾರೆ. ಸ್ಫೋಟದ ತೀವ್ರತೆಗೆ ಇಡೀ ಕಟ್ಟಡ ಧ್ವಂಸಗೊಂಡಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.