ಚೀನಾದ ರೆಸ್ಟೋರೆಂಟ್‌ನಲ್ಲಿ ಸ್ಫೋಟ: ಓರ್ವ ಮೃತ್ಯು, 20ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚೀನಾದ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿ, 20 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಉತ್ತರ ಚೀನಾದ ನಗರವೊಂದರಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, ಹೆಬೈ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ರಾಜಧಾನಿ ಬೀಜಿಂಗ್‌ನಿಂದ ಪೂರ್ವಕ್ಕೆ 50 ಕಿಮೀಗಿಂತ ಕಡಿಮೆ ದೂರದಲ್ಲಿರುವ ಸಾನ್ಹೆ ನಗರದ ವಸತಿ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ.

ಚಿಕನ್ ಅಂಗಡಿಯಲ್ಲಿ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ ಎಂದು ನಂಬಲಾಗಿದೆ. 36 ಆಂಬ್ಯುಲೆನ್ಸ್‌ಗಳು ಮತ್ತು 154 ತುರ್ತು ಸೇವೆಗಳು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಲಾಂಗ್​ಫಾಂಗ್​ ಅಗ್ನಿಶಾಮಕ ಇಲಾಖೆ ವರದಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!