ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಕಾರಿನಲ್ಲಿ ಸ್ಫೋಟಕ ಇಟ್ಟ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಸಚಿನ್ ವಾಜೆಯನ್ನು ಪೊಲೀಸ್ ಸೇವೆಯಿಂದ ವಜಾಗೊಳಿಸಿ ಮುಂಬೈ ಪೊಲೀಸ್ ಇಲಾಖೆ ಆದೇಶಿಸಿದೆ.
ಮುಕೇಶ್ ಅಂಬಾನಿ ಮನೆ ಮುಂದಿ ಸ್ಫೋಟಕ ಇಟ್ಟಿದ್ದ ಕಾರಿನ ಮಾಲೀಕ ಎನ್ನಲಾದ ಮನ್ಸುಖ್ ಹಿರೇನ್ ಸಾವಿನ ಹಿಂದೆ ಅನಿಲ್ ವಾಜೆ ಕೈವಾಡ ಇದೆ ಎಂದು ದೂರಲಾಗಿತ್ತು.
ಮುಕೇಶ್ ಅಂಬಾನಿ ಮನೆ ಮುಂದೆ ಕಾರಿನಲ್ಲಿ ಸ್ಫೋಟಕ ಇಟ್ಟಿದ್ದು ನಾನೇ ಎಂದು ಅಮಾನತಾಗಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ನಂತರ ಈ ಪ್ರಕರಣವನ್ನು ಪರಿಹರಿಸಿ ‘ಸೂಪರ್ ಕಾಪ್’ ಆಗಬೇಕೆಂದಿದ್ದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಎದುರು ಸಚಿನ್ ವಾಜೆ ತಪ್ಪೊಪ್ಪಿಕೊಂಡಿದ್ದಾರೆ. ಅವರ ತಪ್ಪೊಪ್ಪಿಗೆ ಹೇಳಿಕೆಯನ್ನು ಪರಿಶೀಲಿಸಿದ್ದ ಎನ್ಐಎ ಸ್ಫೋಟಕ ಇರಿಸಿದ ಮೂಲ ಉದ್ದೇಶಕ್ಕಾಗಿ ತನಿಖೆ ಚುರುಕುಗೊಳಿಸಿತ್ತು. ಕೆಲ ದಿನಗಳ ನಂತರ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು.
ಇದೀಗ ಎನ್ಐಎ ಬಂಧಿಸಿದ್ದ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆಯನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು. ಸಚಿನ್ ವಾಜೆ ಅವರನ್ನು ಅಮಾನತುಗೊಳಿಸಿ ಮುಂಬೈ ಸ್ಪೆಷಲ್ ಬ್ರ್ಯಾಂಚ್ನ ಹೆಚ್ಚುವರಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದರು.