ಹೊಸದಿಗಂತ ಡಿಜಿಟಲ್ ಡೆಸ್ಕ್:
ರೆಸ್ಟೋರೆಂಟ್‌ವೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 31 ಮಂದಿ ಮೃತಪಟ್ಟಿರುವ ಘಟನೆ ವಾಯುವ್ಯ ಚೀನಾದ ಯಿಂಚುವಾನ್‌ನಲ್ಲಿ ನಡೆದಿದೆ.
ಯಿಂಚುವಾನ್ ನಿಂಗ್ಕ್ಸಿಯಾ ಪ್ರದೇಶದ ಬಾರ್ಬಿಕ್ಯೂ ರೆಸ್ಟೋರೆಂಟ್‌ನಲ್ಲಿ ಬುಧವಾರ ರಾತ್ರಿ 8:40ರ ಸುಮಾರಿಗೆ ಈ ಘಟನೆ ನಡೆದಿದೆ. ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಗಾಯಗೊಂಡ ಏಳು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಇಬ್ಬರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮತ್ತಿಬ್ಬರಿಗೆ ಗಾಜಿನಿಂದ ಗೀರುಗಳು ಉಂಟಾಗಿವೆ ಎಂದು ಕ್ಸಿನ್ಹುವಾ ತಿಳಿಸಿದೆ.
ಘಟನೆ ಬಗ್ಗೆ ತಿಳಿದ ಕೂಡಲೇ ಸ್ಥಳಕ್ಕೆ 12ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಗುರುವಾರ ಮುಂಜಾನೆ 4ರ ಹೊತ್ತಿಗೆ ರಕ್ಷಣಾ ಕಾರ್ಯ ಮುಕ್ತಾಯವಾಗಿದೆ.