ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ಮೂವರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚೆಗೆ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಮೂಲದ ಗಣೇಶ್​, ಮುನಿರಾಜ್​ ಮತ್ತು ಶಿವಕುಮಾರ್​​ ಬಂಧಿತ ಆರೋಪಿಗಳು.

ಐದು ತಂಡ ರಚಿಸಿ ತನಿಖೆ ನಡೆಸಿದ್ದ ಕಲಾಸಿಪಾಳ್ಯ ಠಾಣೆ ಪೊಲೀಸರು ಸದ್ಯ ಮೂವರನ್ನು ಬಂಧಿಸುವ ಮೂಲಕ ಬಂಧಿತರಿಂದ 22 ಜಿಲೆಟಿನ್​ ಜೆಲ್​, 30 ಡಿಟೋನೇಟರ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಬಂಧಿತ ಆರೋಪಿಗಳ ವಿಚಾರಣೆ ವೇಳೆ ಕೆಲವು ಮಾಹಿತಿ ಬಹಿರಂಗಗೊಂಡಿವೆ. ಆರೋಪಿಗಳು ಸ್ಫೋಟಕಗಳನ್ನು ಬ್ಯಾಗ್​ನಲ್ಲಿ ತೆಗೆದುಕೊಂಡು ಬಂದಿದ್ದಾರೆ. ನಂತರ ಬಸ್ ನಿಲ್ದಾಣದಲ್ಲಿರು ಶೌಚಾಲಯಕ್ಕೆ ತೆರಳಿದ್ದು, ಬ್ಯಾಗ್​ಗಳನ್ನು ಹೊರಗಡೆ ಇಟ್ಟು ಹೋಗಿದ್ದಾರೆ. ಈ ವೇಳೆ ಹೊರ ಬಂದಾಗ ಅಲ್ಲಿ ಹೋಮ್ ಗಾರ್ಡ್ಸ್​ ಇರುವುದನ್ನು​ ನೋಡಿ ಬೆದರಿ ಅಲ್ಲಿಯೇ ಬ್ಯಾಗ್​ ಬಿಟ್ಟು ಹೋಗಿದ್ದಾರೆ ಎನ್ನುವ ಮಾಹಿತಿ ಪತ್ತೆಯಾಗಿದೆ. ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!