SHOCKING | ಬೆಳ್ಳಂದೂರಿನ ಶಾಲೆ ಆವರಣದಲ್ಲಿ ಸ್ಫೋಟಕಗಳು ಪತ್ತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಇಡೀ ಬೆಂಗಳೂರನ್ನು ಬೆಚ್ಚಿ ಬೀಳುವಂತೆ ಮಾಡಿತ್ತು. ಇದೀಗ ಈ ಬೆನ್ನಲ್ಲೇ ಶಾಲೆಯ ಆವರಣದಲ್ಲಿ ಸ್ಫೋಟಕಗಳು ಪತ್ತೆಯಾಗಿವೆ.

ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ ಜಿಲೆಟಿನ್ ಕಡ್ಡಿ ಹಾಗೂ ಡಿಟೋನೇಟರ್ ಇನ್ನಿತರ ಸ್ಫೋಟಕಗಳು ಪತ್ತೆಯಾಗಿವೆ.

ಟ್ರ್ಯಾಕ್ಟರ್ ಒಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಎಲ್ಲೆಡೆ ಆತಂಕ ಸೃಷ್ಟಿಯಾಗಿದೆ. ಮೇಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳನ್ನು ಸ್ಫೋಟಿಸಲು ತಂದಂತೆ ಕಾಣುತ್ತಿದೆ. ಬೆಳ್ಳಂದೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!