March 14, 2026
Saturday, March 14, 2026
spot_img

ರಫ್ತು ಸ್ಥಗಿತ: ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮಕ್ಕೆ ಭಾರೀ ಹೊಡೆತ ಕೊಟ್ಟ ಕೊಲ್ಲಿ ಯುದ್ಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮ ದೇಶದ ಹಲವು ವಾಣಿಜ್ಯ ಕ್ಷೇತ್ರಗಳಿಗೆ ತಟ್ಟಿದ್ದು, ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮವೂ ಸಂಕಷ್ಟಕ್ಕೆ ಸಿಲುಕಿದೆ. ಗಲ್ಫ್ ರಾಷ್ಟ್ರಗಳಿಗೆ ನಡೆಯುತ್ತಿದ್ದ ಮೊಟ್ಟೆ ರಫ್ತು ಬಹುತೇಕ ಸ್ಥಗಿತಗೊಂಡಿರುವುದರಿಂದ ಕೋಳಿ ಫಾರ್ಮ್ ಮಾಲೀಕರು ನಷ್ಟ ಎದುರಿಸುತ್ತಿದ್ದಾರೆ.

ಹಾವೇರಿ ಜಿಲ್ಲೆಯಿಂದ ಪ್ರತಿದಿನ ಲಕ್ಷಾಂತರ ಮೊಟ್ಟೆಗಳು ವಿದೇಶಗಳಿಗೆ ರಫ್ತು ಆಗುತ್ತಿದ್ದವು. ಆದರೆ ಯುದ್ಧದ ಹಿನ್ನೆಲೆ ಆಮದು-ರಫ್ತು ವ್ಯವಹಾರದಲ್ಲಿ ಅಡಚಣೆ ಉಂಟಾಗಿ ಮೊಟ್ಟೆಗಳ ಬೆಲೆಯಲ್ಲಿ ಕುಸಿತ ಕಂಡುಬಂದಿದೆ. ಒಂದು ಮೊಟ್ಟೆ 5ರಿಂದ 6 ರೂಪಾಯಿ ದರಕ್ಕೆ ಮಾರಾಟವಾಗುತ್ತಿದ್ದರೆ, ಈಗ ಸುಮಾರು 4 ರೂಪಾಯಿಗೆ ಮಾತ್ರ ವ್ಯಾಪಾರ ನಡೆಯುತ್ತಿದೆ ಎಂದು ಫಾರ್ಮ್ ಮಾಲೀಕರು ತಿಳಿಸಿದ್ದಾರೆ.

ಇದನ್ನೂ ಓದಿ:

ಇದೇ ಪರಿಸ್ಥಿತಿ ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಕಂಡುಬರುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿ ದಿನಕ್ಕೆ ಸುಮಾರು 40 ಲಕ್ಷ ಮೊಟ್ಟೆಗಳು ಉತ್ಪಾದನೆಯಾಗುತ್ತಿದ್ದು, ರಫ್ತು ನಿಂತಿರುವುದರಿಂದ ದೊಡ್ಡ ಪ್ರಮಾಣದಲ್ಲಿ ಮೊಟ್ಟೆಗಳು ಮಾರಾಟವಾಗದೆ ಉಳಿಯುತ್ತಿವೆ.

ಈ ಭಾಗಗಳಿಂದ ಕತಾರ್, ಕುವೈತ್, ಸೌದಿ ಅರೇಬಿಯಾ ಮತ್ತು ದುಬೈ ಸೇರಿದಂತೆ ಹಲವು ಗಲ್ಫ್ ರಾಷ್ಟ್ರಗಳಿಗೆ ಮೊಟ್ಟೆ ರಫ್ತು ಆಗುತ್ತಿತ್ತು. ಆದರೆ ರಫ್ತು ನಿಂತಿರುವ ಕಾರಣ ಸ್ಥಳೀಯ ಮಾರುಕಟ್ಟೆಯಲ್ಲಿ ಕಡಿಮೆ ದರಕ್ಕೆ ಮಾರಾಟ ಮಾಡುವ ಪರಿಸ್ಥಿತಿ ಎದುರಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !