ಎಕ್ಸ್​​ಪ್ರೆಸ್​ ವೇ ಸಾಮಾಜಿಕ, ಆರ್ಥಿಕ ಬೆಳವಣಿಗೆಗೆ ಪೂರಕ: ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ ‌:

ಮಂಡ್ಯದಲ್ಲಿ ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇ (Bengaluru-Mysuru Expressway) ಲೋಕಾರ್ಪಣೆ ಜೊತೆಗೆ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗಾಗಿ ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡಲಿದ್ದಾರೆ.
ಈ ಹಿನ್ನೆಲೆ ಶನಿವಾರ ಸಂಜೆ ಸರಣಿ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ ಹಲವು ಮಾಹಿತಿ ಹಂಚಿಕೊಂಡಿದ್ದಾರೆ.

‘ನಾನು ನಾಳೆ ಕರ್ನಾಟಕದಲ್ಲಿರಲಿದ್ದೇನೆ. ಮಂಡ್ಯ (Mandya), ಹುಬ್ಬಳ್ಳಿ, ಧಾರವಾಡದಲ್ಲಿ (Hubballi Dharwad) ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದೇನೆ. ಸುಮಾರು 16,000 ಕೋಟಿ ರೂ. ಮೊತ್ತದ ಯೋಜನೆಗಳ ಉದ್ಘಾಟನೆ, ಶಂಕುಸ್ಥಾನಪನೆ ನೆರವೇರಲಿದೆ ಎಂದು ಅವರು ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ. ಮಂಡ್ಯದಲ್ಲಿ ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇ (Bengaluru-Mysuru Expressway) ಲೋಕಾರ್ಪಣೆ ಮಾಡಲಾಗುವುದು. ಮೈಸೂರು ಕುಶಾಲನಗರ ಹೈವೇಗೆ (Mysuru-Kushalnagar highway) ಶಂಕುಸ್ಥಾಪನೆ ಮಾಡಲಾಗುವುದು. ಈ ಯೋಜನೆಗಳು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದರ ಜತೆಗೆ ಸಾಮಾಜಿಕ, ಆರ್ಥಿಕ ಬೆಳವಣಿಗೆಗೆ ಪೂರಕವಾಗಲಿವೆ’ ಎಂದು ಟ್ವೀಟ್​ನಲ್ಲಿ ಪ್ರಧಾನಿ ಉಲ್ಲೇಖಿಸಿದ್ದಾರೆ.

ಹುಬ್ಬಳ್ಳಿ ಧಾರವಾಡಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳಾಗಿವೆ. ಐಐಟಿ ಧಾರವಾಡ, ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ಸ್ಟೇಷನ್​ನಲ್ಲಿ ವಿಶ್ವದಲ್ಲೇ ಅತಿ ಉದ್ದದ ರೈಲ್ವೆ ಪ್ಲಾಟ್​​ಫಾರ್ಮ್​​ ಲೋಕಾರ್ಪಣೆಗೊಳಿಸಲಾಗುವುದು. ನೀರು ಪೂರೈಕೆ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗುವುದು ಎಂದು ಮೋದಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!