ಹೊಸದಿಗಂತ ಡಿಜಿಟಲ್ ಡೆಸ್ಕ್;
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಅವಧಿಯನ್ನು ವಿಸ್ತರಿಸುವಂತೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮನವಿ ಮಾಡಿದ್ದೂ, ಎಲ್ಲರ ಅಚ್ಚರಿಗೆ ಕಾರಣವಾಗಿದೆ.
ಲಖನೌನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, ಮಹಾ ಕುಂಭಮೇಳದಲ್ಲಿ ಕೋಟ್ಯಂತರ ಜನ ಭಾಗವಹಿಸಿದ್ದರು. ಪ್ರಯಾಗ್ ರಾಜ್ ನ ರಸ್ತೆಗಳಲ್ಲಿ ಇನ್ನೂ ಲಕ್ಷಾಂತರ ಮಂದಿ ಭಕ್ತರು ಉಳಿದುಕೊಂಡಿದ್ದು, ಅವರೂ ಕುಂಭಮೇಳದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಮಹಾ ಕುಂಭದ ಅವಧಿಯನ್ನು ವಿಸ್ತರಿಸಬೇಕು ಎಂದು ಹೇಳಿದ್ದಾರೆ.
ರಸ್ತೆಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಹಿಂದಿನ ವರ್ಷಗಳಲ್ಲಿ, ಮಹಾ ಕುಂಭ ಮತ್ತು ಕುಂಭಮೇಳವು 75 ದಿನಗಳ ಕಾಲ ನಡೆದಿತ್ತು, ಆದರೆ ಪ್ರಸ್ತುತ ವೇಳಾಪಟ್ಟಿಯ ಅನ್ವಯ ಈ ಅವಧಿ ಕಡಿಮೆಯಾಗಿದೆ. ಈಗಲೂ ಸಹ, ಅನೇಕ ಜನರು ಮಹಾ ಕುಂಭಕ್ಕೆ ಹೋಗಲು ಬಯಸುತ್ತಾರೆ ಆದರೆ ಅದು ಸಾಧ್ಯವಾಗುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಮಹಾ ಕುಂಭದ ಸಮಯ ಮಿತಿಯನ್ನು ವಿಸ್ತರಿಸಬೇಕು ಎಂದು ಹೇಳಿದರು.
ಇದೇ ವೇಳೆ ಕಳೆದ ತಿಂಗಳು ಮಹಾ ಕುಂಭದಲ್ಲಿ ನಡೆದ ಕಾಲ್ತುಳಿತದಿಂದ ಉಂಟಾದ ನಿಜವಾದ ಸಾವಿನ ಸಂಖ್ಯೆಯನ್ನು ರಾಜ್ಯ ಸರ್ಕಾರ ಮರೆಮಾಚಿದೆ ಎಂದು ಅಖಿಲೇಶ್ ಯಾದವ್ ಆರೋಪಿಸಿದರು.