ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ಮತ್ತೆ ಆರು ತಿಂಗಳು ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆಯನ್ನು (ಎಎಫ್‌ಎಸ್‌ಪಿಎ) ವಿಸ್ತರಿಸಲು ರಾಜ್ಯ ಗೃಹ ಇಲಾಖೆ ನಿರ್ಧರಿಸಿದೆ.
ಅಕ್ಟೋಬರ್ 1ರಿಂದ ಅವಧಿ ವಿಸ್ತರಣೆಯು ಜಾರಿಗೆ ಬರಲಿದೆ. ಇಂಫಾಲ್ ಕಣಿವೆಯ 19 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳನ್ನು ಎಎಫ್‌ಎಸ್‌ಪಿಎಯಿಂದ ಹೊರಗಿಡಲಾಗಿದೆ’ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.
19 ಪೊಲೀಸ್ ಠಾಣೆಗಳ ವ್ಯಾಪ್ತಿಯ ಪ್ರದೇಶ ಹೊರತುಪಡಿಸಿ ಇಡೀ ರಾಜ್ಯವನ್ನು ಇನ್ನೂ ಆರು ತಿಂಗಳು ಸಂಘರ್ಷಪೀಡಿತ ಪ್ರದೇಶ ಎಂದು ಘೋಷಿಸಲು ಮಣಿಪುರ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಹೇಳಿದೆ.
ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಸೇನೆಗೆ ಶೋಧ ಕಾರ್ಯಾಚರಣೆ, ಬಂಧನ ಮತ್ತು ಕಂಡಲ್ಲಿ ಗುಂಡು ಹಾರಿಸಲು ವಿಶೇಷಾಧಿಕಾರ ಕಾಯ್ದೆಯಡಿ ಸಂಪೂರ್ಣ ಅಧಿಕಾರವಿದೆ.