ಮುಂದಿನ 5 ವರ್ಷಗಳ ಕಾಲ ಉಚಿತ ಧಾನ್ಯ ವಿತರಣೆ ಯೋಜನೆ ವಿಸ್ತರಣೆ: ಪ್ರಧಾನಿ ಮೋದಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಮುಂದಿನ 5 ವರ್ಷಗಳ ಕಾಲ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಉಚಿತ ಧಾನ್ಯ ವಿತರಣೆ ಯೋಜನೆ ಮುಂದುವರೆಯಲಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.

ರಾಜಸ್ಥಾನದ ಭರತಪುರದಲ್ಲಿ ನಡೆದ ‘ವಿಜಯ್ ಸಂಕಲ್ಪ’ ಸಾರ್ವಜನಿಕ ಸಭೆಯಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಕೊರೋನಾ ಸಮಯದಲ್ಲಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಉಚಿತ ಧಾನ್ಯ ವಿತರಣೆ ಯೋಜನೆ ಇದೇ ಡಿಸೆಂಬರ್​ನಲ್ಲಿ ಪೂರ್ಣಗೊಳ್ಳಲಿದೆ. ಆದರೆ, ಪ್ರತಿಯೊಬ್ಬ ಬಡವನ ಮನೆಯಲ್ಲಿ ಒಲೆ ಉರಿಬೇಕು, ಯಾರೊಬ್ಬರು ಹಸಿವಿನಿಂದ ಬಳಲಬಾರದು ಎಂಬ ದೃಷ್ಟಿಯಿಂದ ಈ ಉಚಿತ ಧಾನ್ಯ ವಿತರಣೆ ಯೋಜನೆಯನ್ನು ಮುಂದಿನ 5 ವರ್ಷಗಳ ಕಾಲ ವಿಸ್ತರಿಸಲಾಗಿದೆ ಎಂದು ಹೇಳಿದರು.

ಈ ವಿಚಾರವಾಗಿ ನನ್ನ ವಿರುದ್ಧ ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ. ಆದರೆ, ಬಡವರ ಹೊಟ್ಟೆಪಾಡಿಗಾಗಿ ನಾನು ಜೈಲಿಗೆ ಹೋಗಲೂ ಸಿದ್ದ ಎಂದು ಹೇಳಿದರು.

ಇದೇ ವೇಳೆ ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ, ಸರ್ಕಾರ ರಚನೆಯಾದ ನಂತರ ಪ್ರಾಣಿಗಳಿಗೆ ಉಚಿತ ಲಸಿಕೆ ನೀಡುತ್ತೇವೆ ಮತ್ತು ಇಡೀ ಲಸಿಕೆ ಯೋಜನೆಯನ್ನು ಜಾರಿಗೊಳಿಸುತ್ತೇವೆ. ರಾಜ್ಯ ಸರಕಾರ ರಚನೆಯಾದ ನಂತರ ರಾಜ್ಯ ಸಂಪೂರ್ಣ ಅಭಿವೃದ್ಧಿ ಪಡಿಸಲಾಗುವುದು. ಜತೆಗೆ ರೈತರು ಪ್ರಧಾನ ಮಂತ್ರಿ ನಿಧಿಯಿಂದ 12,000 ರೂ.ಗಳನ್ನು ನೀಡಲಾಗುತ್ತದೆ ಎಂದು ಅಭಯ ನೀಡಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!