ಮುಂದಿನ ಐದು ವರ್ಷಕ್ಕೆ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ: ಪ್ರಧಾನಿ ಮೋದಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಡವರಿಗೆ ಉಚಿತ ಪಡಿತರ ನೀಡುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Pradhan Mantri Garib Kalyan Anna Yojana) ಮುಂದಿನ ಐದು ವರ್ಷಕ್ಕೆ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮಹತ್ವದ ಘೋಷಣೆ ಮಾಡಿದ್ದಾರೆ.

ಛತ್ತೀಸ್‌ಗಢದಲ್ಲಿ (Chattisgarh) ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ (BJP) ಸರ್ಕಾರವು ಮುಂದಿನ 5 ವರ್ಷಗಳವರೆಗೆ ದೇಶದ 80 ಕೋಟಿ ಬಡವರಿಗೆ ಉಚಿತ ಪಡಿತರವನ್ನು ಒದಗಿಸುವ ಯೋಜನೆಯನ್ನು ವಿಸ್ತರಿಸಲು ನಾನು ನಿರ್ಧರಿಸಿದ್ದೇನೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದವು ಯಾವಾಗಲೂ ಪವಿತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ನನಗೆ ಶಕ್ತಿಯನ್ನು ನೀಡುತ್ತದೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಪರಿಚಯಿಸಲಾಯಿತು. ಇದರ ಅಡಿಯಲ್ಲಿ ಸರ್ಕಾರವು ಪ್ರತಿ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ಪೂರೈಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!