ಮುರುಘಾ ಶ್ರೀ ಸಹಿತ ಮೂವರು ಆರೋಪಿಗಳ ನ್ಯಾಯಂಗ ಬಂಧನ ಅವಧಿ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪೋಸ್ಕೋ ಪ್ರಕರಣದಲ್ಲಿ ಬಂಧನದಲ್ಲಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಡಿಸೆಂಬರ್ 15ರವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ಪೋಸ್ಕೋ ಕೇಸ್ ನಲ್ಲಿ ಬಂಧನಕ್ಕೆ ಒಳಗಾಗಿರುವ ಎ.1 ಆರೋಪಿ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರು, ಎ2 ಆರೋಪಿ ವಾರ್ಡನ್ ರಶ್ಮಿ ಹಾಗೂ ಎ4 ಆರೋಪಿ ಪರಮಶಿವಯ್ಯ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿತ್ತು. ಈ ಹಿನ್ನೆಲೆ ಇಂದು ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಿದ್ದರು.
ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು, ಮುರುಘಾ ಶ್ರೀ ಸೇರಿದಂತೆ ಮೂವರು ಆರೋಪಿಗಳಿಗೆ ಡಿಸೆಂಬರ್ 15ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!