ಹೊಸದಿಗಂತ ವರದಿ, ಮಂಗಳೂರು:
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಮಂಗಳೂರು ಸೆಂಟ್ರಲ್- ಕಬಕ ಪುತ್ತೂರು ರೈಲನ್ನು ಸುಬ್ರಹ್ಮಣ್ಯ ರೋಡ್‌ಗೆ ವಿಸ್ತರಿಸಿ ಕೇಂದ್ರ ರೈಲ್ವೆ ಸಚಿವಾಲಯ ಆದೇಶಿಸಿದೆ.
ಪರಿಷ್ಕೃತ ವೇಳಾಪಟ್ಟಿಯಂತೆ ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲು (56625) ಮುಂಜಾನೆ 4 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಬೆಳಗ್ಗೆ 5.18 ಕ್ಕೆ ಕಬಕ ಪುತ್ತೂರು ಮತ್ತು 6.30 ಕ್ಕೆ ಸುಬ್ರಹ್ಮಣ್ಯ ರೋಡ್ ತಲುಪಲಿದೆ.
ಸುಬ್ರಹ್ಮಣ್ಯ ರೋಡ್- ಮಂಗಳೂರು ಸೆಂಟ್ರಲ್ ಪ್ಯಾಸೆಂಜರ್ (56626) ಬೆಳಗ್ಗೆ 7 ಗಂಟೆಗೆ ಸುಬ್ರಹ್ಮಣ್ಯ ರೋಡ್‌ನಿಂದ ಹೊರಟು 7.48 ಕ್ಕೆ ಕಬಕ ಪುತ್ತೂರು ಮತ್ತು ಬೆಳಗ್ಗೆ 9.30 ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ (56627) ಸಂಜೆ 5.45 ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ರಾತ್ರಿ 7.03 ಕ್ಕೆ ಕಬಕ ಪುತ್ತೂರು ಮತ್ತು 8.10 ಕ್ಕೆ ಸುಬ್ರಹ್ಮಣ್ಯ ರೋಡ್ ತಲುಪುವುದು. ಸುಬ್ರಹ್ಮಣ್ಯ ರೋಡ್- ಮಂಗಳೂರು ಸೆಂಟ್ರಲ್ ಪ್ಯಾಸೆಂಜರ್ (56628) ರಾತ್ರಿ 8.40 ಕ್ಕೆ ಸುಬ್ರಹ್ಮಣ್ಯ ರೋಡ್‌ನಿಂದ ಹೊರಟು 9.30 ಕ್ಕೆ ಕಬಕ ಪುತ್ತೂರು ಮತ್ತು 11.10 ಕ್ಕೆ ಮಂಗಳೂರು ಸೆಂಟ್ರಲ್ ತಲುಪುವುದು.
ಪರಿಷ್ಕೃತ ಆದೇಶವು ಶೀಘ್ರವೇ ಜಾರಿಗೆ ಬರಲಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಸಂಸದ ಕ್ಯಾ. ಚೌಟ ಹರ್ಷ
ಈ ರೈಲು ವಿಸ್ತರಣೆಗೆ ಮಂಜೂರಾತಿ ಲಭಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು, ಮಂಗಳೂರು ಸೆಂಟ್ರಲ್- ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಿರುವುದಕ್ಕೆ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಖ್ಯಾತೆ ಸಚಿವರಾದ ವಿ. ಸೋಮಣ್ಣ ಹಾಗೂ ರೈಲ್ವೆ ಮಂಡಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.