ಪದವಿ ಪೂರ್ವ ಕಾಲೇಜುಗಳ ಮದ್ಯಂತರ ರಜೆ ವಿಸ್ತರಣೆ: ರಾಜ್ಯ ಸರಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸರ್ಕಾರದಿಂದ 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ಮಧ್ಯಂತರ ರಜೆಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ.
ಈ ಮೂಲಕ ಪದವಿ ಪೂರ್ವ ಕಾಲೇಜು ( PU College ) ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದೆ. ಅಕ್ಟೋಬರ್ 14ರಿಂದ ಕಾಲೇಜುಗಳನ್ನು ಪುನರಾರಂಭಿಸೋದಕ್ಕೆ ಸೂಚಿಸಲಾಗಿದೆ.
ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆಯ 2022-23ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮಾರ್ಗಸೂಚಿಯಲ್ಲಿ ಮಧ್ಯಂತರ ರಜೆಯನ್ನು ದಿನಾಂಕ 01-10-2022 ರಿಂದ 12-10-2022ರವರೆಗೆ ನಿಗದಿ ಪಡಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಇದೀಗ ದಿನಾಂಕ 13-10-2022ರಂದು ಒಂದು ದಿನ ಹೆಚ್ಚುವರಿಯಾಗಿ ರಜೆಯನ್ನು ವಿಸ್ತರಿಸಲಾಗಿದೆ. ಹೀಗಾಗಿ ಎಲ್ಲಾ ಪದವಿ ಪೂರ್ವ ಕಾಲೇಜುಗಳನ್ನು ದಿನಾಂಕ 14-10-2022ರಿಂದ ಮರು ಪ್ರಾರಂಭಿಸುವಂತೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!