ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ. ಮೈಸೂರು ಸೇರಿದಂತೆ ನಾಡಿನ ವಿವಿಧ ಭಾಗಗಳಲ್ಲಿ ಸಂಭ್ರಮದಿಂದ ದಸರಾ ಆಚರಣೆ ಮಾಡಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು ಇನ್ನು 10-12 ದಿನಗಳವರೆಗೂ ವಿಸ್ತರಣೆ ಮಾಡಲಾಗಿದೆ ಎಂದರು.
ಇದೇ ವೇಳೆ, ‘ದುಷ್ಟ ಶಕ್ತಿಯ ಎದುರು ಸತ್ಯದ ಜಯ’ ಎಂಬ ಸರ್ಕಾರಿ ಜಾಹೀರಾತಿಗೆ ಬಿಜೆಪಿ ಮತ್ತು ಜೆಡಿಎಸ್ ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಮಗೆ ಬಂದಿರುವ ಮಾಹಿತಿಯನ್ನು ನಮ್ಮದೇ ಆದ ಭಾವನೆ ಮೂಲಕ ಜನರಿಗೆ ತಿಳಿಸಿದ್ದೇವೆ. ಉಳಿದ ವಿಚಾರವನ್ನು ವಿಧಾನಸಭೆಯಲ್ಲಿ ಚರ್ಚೆ ಮಾಡೋಣ ಎಂದು ಹೇಳಿದರು. ಅಂತೆಯೇ ರಾಜ್ಯಕ್ಕೆ ತೆರಿಗೆ ಪಾಲು ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು.