ಮುಂದಿನ 5 ವರ್ಷಗಳಿಗೆ ರಾಷ್ಟ್ರೀಯ ಆರೋಗ್ಯ ಮಿಷನ್ ವಿಸ್ತರಣೆ: ಪ್ರಧಾನಿ ಮೋದಿ ಸಂಪುಟ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್​ಎಚ್​ಎಂ) ಅನ್ನು ಮುಂದಿನ 5 ವರ್ಷಗಳಿಗೆ ವಿಸ್ತರಿಸಲು ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ಹೇಳಿದರು.

NHMಗೆ 5 ವರ್ಷಗಳ ವಿಸ್ತರಣೆಯನ್ನು ಘೋಷಿಸಲಾಗಿದ್ದು, ಈ ಯೋಜನೆಗೆ ಯಾವುದೇ ಬಜೆಟ್ ನಿರ್ಬಂಧಗಳಿಲ್ಲ ಎಂದು ಕೇಂದ್ರ ಸರ್ಕಾರ ಖಚಿತಪಡಿಸುತ್ತದೆ ಎಂದು ಗೋಯಲ್ ಹೇಳಿದರು. ಮುಂಬರುವ ಬಜೆಟ್ ಸಾರ್ವತ್ರಿಕ ಆರೋಗ್ಯ ಸೇವೆಯ ಬಗ್ಗೆ ಕೇಂದ್ರದ ಬದ್ಧತೆಯನ್ನು ತೋರಿಸುತ್ತದೆ ಎಂದು ಸುಳಿವು ನೀಡಿದರು.

ಫೆಬ್ರವರಿ 1ರಂದು ಬಜೆಟ್ ಮಂಡಿಸಲಾಗುವುದು. ನಮ್ಮ ಸರ್ಕಾರ ಯಾವಾಗಲೂ ಆರೋಗ್ಯದ ಮೇಲೆ ಹೆಚ್ಚಿನ ಕೇಂದ್ರೀಕರಿಸಿದೆ. ರಾಷ್ಟ್ರೀಯ ಆರೋಗ್ಯ ಮಿಷನ್‌ಗೆ ಅಗತ್ಯವಿರುವ ಸಂಪೂರ್ಣ ಹಣವನ್ನು ಒದಗಿಸಲಾಗುವುದುಎಂದು ಸಚಿವರು ಹೇಳಿದರು.

2021 ಮತ್ತು 2024ರ ಅವಧಿಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್​ನಡಿ 12 ಲಕ್ಷಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರನ್ನು ತೊಡಗಿಸಿಕೊಂಡಿದೆ ಮತ್ತು 220 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.

ಈಗಾಗಲೇ 12 ಲಕ್ಷ ಆರೋಗ್ಯ ಕಾರ್ಯಕರ್ತರು ರಾಷ್ಟ್ರೀಯ ಆರೋಗ್ಯ ಮಿಷನ್​ನಡಿ ನೋಂದಾಯಿಸಿಕೊಂಡಿದ್ದಾರೆ. ಇದು ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ. NHM ಅಡಿಯಲ್ಲಿ 220 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳನ್ನು ನೀಡಲಾಯಿತು. ಕಳೆದ 10 ವರ್ಷಗಳಲ್ಲಿ ಈ ಮಿಷನ್ ಐತಿಹಾಸಿಕ ಗುರಿಗಳನ್ನು ತಲುಪಿದೆ ಎಂದು ಪಿಯೂಷ್ ಗೋಯೆಲ್ ಹೇಳಿದರು.

ಇದರ ಜೊತೆಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ಸೆಣಬಿನ ಕನಿಷ್ಠ ಬೆಂಬಲ ಬೆಲೆಯನ್ನು (MSP) ಕ್ವಿಂಟಾಲ್‌ಗೆ 315 ರೂ. ಅಥವಾ ವರ್ಷದಿಂದ ವರ್ಷಕ್ಕೆ ಶೇ.6ರಷ್ಟು ಹೆಚ್ಚಿಸುವುದಾಗಿ ಘೋಷಿಸಿದೆ. ಹೊಸ MSP ಪ್ರತಿ ಕ್ವಿಂಟಾಲ್‌ಗೆ 5,650 ರೂ.ಗಳಾಗಿದ್ದು, ಉತ್ಪಾದಕರಿಗೆ ಶೇ. 66.8ರಷ್ಟು ಲಾಭವನ್ನು ನೀಡುತ್ತದೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!