‘HSRP ನಂಬರ್ ಪ್ಲೇಟ್’ ಅಳವಡಿಸುವ ಅವಧಿ ವಿಸ್ತರಣೆ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ( hsrp number plate ) ಅಳವಡಿಸುವ ಯೋಜನೆಯಲ್ಲಿ ಕಡ್ಡಾಯಗೊಳಿಸಲಾಗಿತ್ತು. ಹೀಗಿದ್ದೂ ಅನೇಕ ವಾಹನ ಸಾವರರು ನಂಬರ್ ಪ್ಲೇಟ್ ಅಳವಡಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಮತ್ತೆ ಅವಧಿಯನ್ನು ದಿನಾಂಕ ಮೇ 31 ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ( Karnataka Government ) ಅಧಿಕೃತ ಆದೇಶ ಹೊರಡಿಸಿದೆ.

ಈ ಸಂಬಂಧ ಸಾರಿಗೆ ಇಲಾಖೆಯ ( Transport Department ) ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್.1, 2019ಕ್ಕಿಂತ ಮೊದಲು ಖರೀದಿಸಿದಂತ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿವುದು ಕಡ್ಡಾಯಗೊಳಿಸಲಾಗಿದೆ ಎಂದಿದ್ದಾರೆ.

ಈ ಮೊದಲು HSRP ನಂಬರ್ ಪ್ಲೇಟ್ ಅಳವಡಿಸೋದಕ್ಕೆ ದಿನಾಂಕ 16-11-2023ರವರೆಗೆ ಅವಕಾಶ ನೀಡಲಾಗಿತ್ತು. ಆನಂತ್ರ ಅದನ್ನು ದಿನಾಂಕ 17-02-2024ರವರೆಗೆ ವಿಸ್ತರಿಸಲಾಗಿತ್ತು. ಆದ್ರೇ ಇನ್ನೂ ವಾಹನ ಸಾವರರು ಹೆಚ್ಚು ಕಾಲಾವಕಾಶ ಕೋರಿದ್ದರಿಂದ ದಿನಾಂಕ 31-05-2024ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!