ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಏಪ್ರಿಲ್ 6 ರವರೆಗೆ ವಿಸ್ತರಿಸಿದೆ.
ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿದೆ.
ಶಿವಕುಮಾರ್ ಅವರು ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲು ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಇನ್ನೊಂದು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಏಪ್ರಿಲ್ 6ರವರೆಗೆ ಕಾಲಾವಕಾಶ ನೀಡಿ, ವಿಚಾರಣೆಯನ್ನು ಮುಂದೂಡಿದೆ.