ಸರ್ಕಾರಿ ಆಸ್ಪತ್ರೆಗಳ 7,045 ಗುತ್ತಿಗೆ ನೌಕರರ ಸೇವೆ 2025ರವರೆಗೆ ವಿಸ್ತರಣೆ : ಎಚ್‌. ಕೆ. ಪಾಟೀಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ  ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 7045 ನೌಕರರ ಸೇವೆಯನ್ನು 2025ರ ಮಾರ್ಚ್‌ವರೆಗೆ ಮುಂದುವರೆಸಲಾಗುವುದು ಎಂದು ಕರ್ನಾಟಕದ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಮಂಜೂರಾದ ಒಟ್ಟು 7045 ಸಮುದಾಯ ಆರೋಗ್ಯಧಿಕಾರಿಗಳ ಹುದ್ದೆಗಳ ಕಾಲಾವಧಿಯನ್ನು ಗುತ್ತಿಗೆ ಆಧಾರದಲ್ಲಿ 2025ನೇ ಮಾರ್ಚ್ ಅಂತ್ಯದವರೆಗೆ ಮುಂದುವರೆಸುವ ಬಗ್ಗೆ  ಸಂಪುಟ ಸಭೆ ತಿರ್ಮಾನ ಮಾಡಲಾಗಿದೆ. ಈ ಮೂಲಕ ಅವರ ಸೇವೆಯನ್ನು ಇನ್ನೂ ಆರು ತಿಂಗಳ ಕಾಲ ಮುಂದುವರಿಕೆ ಮಾಡಲಾಗುತ್ತದೆ ಎಂದಿದ್ದಾರೆ.

ಮುಂದುವರೆದು, ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗಳಿಗೆ ಅಭಿಯೋಜನಾ ಇಲಾಖೆಯ 12 ನಿವೃತ್ತ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಮಂಜೂರಾದ ಒಟ್ಟು 7045 ಸಮುದಾಯ ಆರೋಗ್ಯಧಿಕಾರಿಗಳ ಹುದ್ದೆಗಳ ಕಾಲಾವಧಿಯನ್ನು ಗುತ್ತಿಗೆ ಆಧಾರದಲ್ಲಿ 2025ನೇ ಮಾರ್ಚ್ ಅಂತ್ಯದವರೆಗೆ ಮುಂದುವರೆಸುವ ಬಗ್ಗೆ  ಸಂಪುಟ ಸಭೆ ತಿರ್ಮಾನ ಮಾಡಲಾಗಿದೆ. ಈ ಮೂಲಕ ಅವರ ಸೇವೆಯನ್ನು ಇನ್ನೂ ಆರು ತಿಂಗಳ ಕಾಲ ಮುಂದುವರಿಕೆ ಮಾಡಲಾಗುತ್ತದೆ. ಮುಂದುವರೆದು, ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗಳಿಗೆ ಅಭಿಯೋಜನಾ ಇಲಾಖೆಯ 12 ನಿವೃತ್ತ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!