ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ಮೂಲಕ ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ಸರಕಾರದ ವಿರುದ್ಧ ಖಾಸಗಿ ಸಾರಿಗೆ ಸಂಘಟನೆಗಳು ಸಿಡಿದೆದ್ದಿದ್ದು, ಜುಲೈ 27 ರಂದು ಮುಷ್ಕರಕ್ಕೆ ಕರೆ ನೀಡಿದೆ.
ಇದರ ಬೆನ್ನಲ್ಲೇ ಎಚ್ಚೆತ್ತ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಮಾಹಿತಿ ನೀಡಿದ್ದಾರೆ. ಯಾವ ರೀತಿ ಸರಕಾರಿ ಬಸ್ ಗಳಲ್ಲಿ ‘ಶಕ್ತಿ ಯೋಜನೆ’ ಜಾರಿಯಾಗಿದೆಯೋ ಅದೇ ರೀತಿ ಖಾಸಗಿ ಬಸ್ಸುಗಳಿಗೂ ಶಕ್ತಿ ಯೋಜನೆ ವಿಸ್ತರಣೆ ಬಗ್ಗೆ ಸಿಎಂ ಜೊತೆ ಸದ್ಯದಲ್ಲೇ ಚರ್ಚೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಶಕ್ತಿ’ ಯೋಜನೆಯಿಂದ ಆಗಿರುವ ತೊಂದರೆ ಪರಿಹರಿಸುವಂತೆ ಒತ್ತಾಯಿಸಿ ಜು.27 ರಂದು ನಗರದಲ್ಲಿ ಆಟೋರಿಕ್ಷಾ, ಖಾಸಗಿ ಬಸ್, ಓಲಾ- ಊಬರ್, ಮ್ಯಾಕ್ಸಿಕ್ಯಾಬ್ಗಳ ಮಾಲೀಕ, ಚಾಲಕರು ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆ ಪ್ರಯಾಣಿಕರಿಗೆ ತೊಂದರೆ ಆಗಲಿದೆ.ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಆಟೋರಿಕ್ಷಾ ಸೇರಿ ಸಾರ್ವ ಜನಿಕ ಸೇವೆಯ ಖಾಸಗಿ ವಾಹನ ಚಾಲಕರಿಗೆ ಮಾಸಿಕ 10 ಸಾವಿರ ಪರಿಹಾರಕ್ಕೆ ಒತ್ತಾಯಿಸಿ ರಾಯಣ್ಣ ವೃತ್ತದಿಂದ ನಗರದಲ್ಲಿ ಸಾವಿರಾರು ಚಾಲಕರು ಸೇರಿ ರ್ಯಾಲಿ ನಡೆಸಿ, ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಜೆ 7 ಗಂಟೆವರೆಗೆ ಧರಣಿ ನಡೆಸಲು ನಿರ್ಧಾರ ಮಾಡಿರುವುದಾಗಿ ಖಾಸಗಿ ಸಾರಿಗೆ ಸಂಘಟನೆಗಳು ಘೋಷಿಸಿದೆ.