Sunday, September 7, 2025

ಸಾರಿಗೆ ನೌಕರರ ಮುಷ್ಕರಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆ: ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾರಿಗೆ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಯಿತು.

ಈ ವೇಳೆ ಹೈಕೋರ್ಟ್ ನ್ಯಾಯಪೀಠವು ವಾದ-ಪ್ರತಿವಾದವನ್ನು ಆಲಿಸಿ ಸಾರಿಗೆ ನೌಕರರ ಮುಷ್ಕರಕ್ಕೆ ನೀಡಿದ್ದ ತಡೆಯಾಜ್ಞೆಯನ್ನು 2 ದಿನ ವಿಸ್ತರಿಸಿ ಆದೇಶಿಸಿದೆ.

ವಿಚಾರಣೆ ಸಮಯ ಮುಷ್ಕರದಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂಬುದಾಗಿ ಎಜಿ ಕೋರ್ಟ್ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಪೀಠವು ರಾಜಿ ಸಂಧಾನದ ಮಾತುಕತೆ ಏನಾಗಿದೆ ಎಂಬುದಾಗಿ ಪ್ರಶ್ನಿಸಿತು. ಇಲ್ಲಿಯವರೆಗೆ ನಡೆದ ಮಾತುಕತೆ ವಿವರಗಳನ್ನು ಎಜೆ ಹೈಕೋರ್ಟ್ ನ್ಯಾಯಪೀಠಕ್ಕೆ ನೀಡಿದರು. ಅಲ್ಲದೇ ಇಂಡಸ್ಟ್ರಿಯಲ್ ಡಿಸ್ಪ್ಯೂಟ್ ಕಾಯ್ದೆಯಂತೆ ಸಂಧಾನಸಭೆ ನಡೆಸಲಾಗ್ತಿದೆ ಎಂಬುದಾಗಿ ತಿಳಿಸಿದರು.

ಈ ವೇಳೆ ಸಾರಿಗೆ ಸಂಘಟನೆಗಳ ವಕೀಲರಿಗೆ ನ್ಯಾಯಾಂಗ ನಿಂದನೆಯ ಎಚ್ಚರಿಕೆಯನ್ನು ಹೈಕೋರ್ಟ್ ನೀಡಿತು. ಕಾರಣ ಇಂದು ಮುಷ್ಕರ ನಿಲ್ಲಿಸುವಂತೆ ಆದೇಶದ ನಡುವೆಯೂ ಸಾರಿಗೆ ಸಂಚಾರ ಸ್ಥಗಿತಗೊಳಿಸಿದ್ದಕ್ಕೆ ಸಿಜೆ ವಿಭು ಬಕ್ರು, ನ್ಯಾಯಮೂರ್ತಿ ಸಿ ಎಂ ಜೋಶಿ ಅವರಿದ್ದ ಹೈಕೋರ್ಟ್ ನ್ಯಾಯಪೀಠವು ಕೆಂಡಾಮಂಡಲವಾಯಿತು. ಅಲ್ಲದೇ ಮುಷ್ಕರ ನಿಲ್ಲಿಸಲಾಗಿದೆಯೇ ಎಂಬುದಾಗಿ ಪ್ರಶ್ನಿಸಿತು.

ಇದನ್ನೂ ಓದಿ