ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ ಗಲಭೆಗೆ ಕೇಸ್ನಲ್ಲಿ ಸಾಕ್ಷ್ಯಧಾರಗಳನ್ನು ತಿರುಚಿಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ (Teesta Setalvad) ಅವರಿಗೆ ಜುಲೈ 1ರಂದು ನೀಡಿದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು ಜುಲೈ 19 ರ ಮುಂದಿನ ವಿಚಾರಣೆಯವರೆಗೆ ವಿಸ್ತರಿಸಿದೆ.
2002ರ ಗೋಧ್ರಾ ಗಲಭೆ ಪ್ರಕರಣಗಳಲ್ಲಿ ನಿರಪರಾಧಿಗಳನ್ನು ಬಂಧಿಸಲು ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಪ್ರಕರಣದಲ್ಲಿ ಶರಣಾಗುವಂತೆ ಗುಜರಾತ್ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ತೀಸ್ತಾ ಸೆಟಲ್ವಾಡ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.
ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.ಆದರೆ ಸುಪ್ರಿಂ ಕೋರ್ಟ್ ತೀಸ್ತಾ ಸೆಟಲ್ವಾಡ್ ಅವರಿಗೆ ಜುಲೈ 1ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು ಮತ್ತು ಸದ್ಯಕ್ಕೆ ಹೈಕೋರ್ಟ್ ಆದೇಶವನ್ನು ತಡೆಹಿಡಿದಿತ್ತು.