Saturday, June 25, 2022

Latest Posts

ಅಕ್ರಮ ಮ‌ನೆಗಳ ಸಕ್ರಮಕ್ಕೆ ಕಾಲಾವಧಿ ವಿಸ್ತರಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಸೋಮವಾರಪೇಟೆ:

ಅಕ್ರಮವಾಗಿ ನಿರ್ಮಿಸಿಕೊಂಡಿರುವ ಮನೆಗಳ ಸಕ್ರಮಕ್ಕೆ ಕಾಲಾವಧಿ ವಿಸ್ತರಣೆ ಮಾಡಲಾಗಿದ್ದು ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ.
ಪಟ್ಟಣ ಹಾಗೂ ಗ್ರಾಮೀಣ ಭಾಗಗಳ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ವಾಸದ ಮನೆ ನಿರ್ಮಿಸಿಕೊಂಡಿರುವವರು ಸಕ್ರಮ ಗೊಳಿಸಿಕೊಳ್ಳಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 94 ಸಿ ಹಾಗೂ 94ಸಿಸಿ ಅಡಿ ಅರ್ಜಿ ಸಲ್ಲಿಸಲು 2022ರ ಮಾಚ್೯ 31ವರೆಗೆ ಅವಧಿ ವಿಸ್ತರಿಸಲಾಗಿದೆ ಆದ್ದರಿಂದ ಜನತೆ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss