Saturday, October 1, 2022

Latest Posts

ಹಣ ಸುಲಿಗೆ ಪ್ರಕರಣ: 6 ಗಂಟೆಗಳ ಕಾಲ ಮಾದಕ ಬೆಡಗಿ ನೂರಾ ಫತೇಹಿ ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಸುಕೇಶ್‌ ಚಂದ್ರಶೇಖರ್‌ ವಿರುದ್ಧ ದಾಖಲಾಗಿರುವ 200ಕೋಟಿ ರೂಪಾಯಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ನೋರಾ ಫತೇಹಿ ಅವರನ್ನು ದೆಹಲಿ ಪೋಲೀಸರು ಶುಕ್ರವಾರ ಸುಮಾರು ಆರುಗಂಟೆಗಳ ಕಾಲ ವಿಚಾರಣೆ ನಡೆಸಿದರು.

ಪ್ರಕರಣದಲ್ಲಿ ಸಾಕ್ಷಿಯಾಗಿ ನೋರಾ ಅವರನ್ನು ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ವಿಚಾರಣೆ ನಡೆಸಿದೆ. ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಅವರ ಬಳಿ ಸುಕೇಶ್‌ ಅವರು ನೀಡಿದ ಉಡುಗೊರೆಗಳ ಬಗ್ಗೆ ಪ್ರಶ್ನಿಸಲಾಗಿದೆ.

ಮೂಲಗಳ ವರದಿಯ ಪ್ರಕಾರ ಸುಕೇಶ್‌ ಅವರಿಂದ ಬಿಎಂಡಬ್ಲ್ಯು ಕಾರನ್ನು ಉಡುಗೊರೆಯಾಗಿ ಪಡೆದಿರುವ ಆರೋಪವನ್ನು ನೋರಾ ಫತೇಹಿ ತಳ್ಳಿಹಾಕಿದ್ದು ಚೆನ್ನೈನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಕ್ಕೆ ಪ್ರತಿಯಾಗಿ ಸುಕೇಶ್ ಅವರ ಪತ್ನಿ ಕಾರನ್ನು ಉಡುಗೊರೆಯಾಗಿ ನೀಡಿದ್ದರು ಎಂದು ನೂರಾ ಫತೇಹಿ ಪೋಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!