ಹೊಸ ದಿಗಂತ ವರದಿ,ಶ್ರೀರಂಗಪಟ್ಟಣ :
ಪ್ರವಾಸಿಗರ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಕೆಆರ್‌ಎಸ್ ಪೊಲೀಸ್ ಠಾಣಾ ಮುಖ್ಯ ಸಿಬ್ಬಂದಿ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಜಿಲ್ಲಾ ವರಿಷ್ಠಾಧಿಕಾರಿಗಳು ಅಮಾನತು ಮಾಡಿ ಆದೇಶಿಸಿದ್ದಾರೆ.
ಠಾಣೆಯ ಮುಖ್ಯಸಿಬ್ಬಂದಿ ಪುರುಷೋತ್ತಮ್ ಸೇರಿದಂತೆ ಎಸ್.ಬಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆ ಅನಿಲ್ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ಪ್ರಭಸ್ವಾಮಿ ಅಮಾನತು ಗೊಂಡವರು.
ಈ ಮೂವರು ಕೆಅರ್‌ಎಸ್‌ನ ವೀಕ್ಷಣೆಗಾಗಿ ಬರುವ ಪ್ರವಾಸಿಗರ ವಾಹನಗಳಿಂದ ಹೆಚ್ಚಾಗಿ ಹೊರ ರಾಜ್ಯದ ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿದಂತೆ ಇತರೆಡೆಗಳಿಂದ ಬರುತ್ತಿದ್ದ ವಾಹನಗಳನ್ನು ಗುರಿಯಾಗಿಸಿಕೊಂಡು ಚಾಲಕರಿಂದ ಅವರಿಂದ ಹಣ ವಸೂಲಿ ಮಾಡುತ್ತಿದ್ದರು ಎನ್ನಲಾಗಿದೆ