ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋ ಬೆಳಗಿನ ಜನದಟ್ಟಣೆಯ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಟ್ರಿಪ್ ಸೇವೆ ನೀಡುವುದಾಗಿ ಬಿಎಂಆರ್ಸಿಎಲ್ ನಿರ್ಧರಿಸಿದ್ದು, ಸೆಪ್ಟೆಂಬರ್ 1 ರಿಂದ ಹೆಚ್ಚುವರಿ ಟ್ರಿಪ್ (Namma Metro) ಸೇವೆ ಆರಂಭಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಪ್ರಕಟಣೆಯಲ್ಲಿ ತಿಳಿಸಿದೆ.
ನೇರಳೆ ಮಾರ್ಗದಲ್ಲಿ ವಾರದ 5 ದಿನಗಳಲ್ಲಿ ಹೆಚ್ಚುವರಿ ಟ್ರಿಪ್ ಮೆಟ್ರೋ ಸೇವೆ ಬಗ್ಗೆ ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.
ಸೋಮವಾರದಿಂದ ಶುಕ್ರವಾರದವರೆಗೆ ಹೆಚ್ಚುವರಿ ಟ್ರಿಪ್ ನಡೆಸಲಿರುವ ನಮ್ಮ ಮೆಟ್ರೋ, ಮೆಜೆಸ್ಟಿಕ್ ನಿಲ್ದಾಣದಿಂದ ಎಂ.ಜಿ ರೋಡ್ವರೆಗೆ ಹೆಚ್ಚುವರಿ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಬೈಯಪ್ಪನಹಳ್ಳಿಗೆ ತೆರಳುವವರು ಎಂ.ಜಿ ರೋಡ್ ನಿಲ್ದಾಣದಲ್ಲಿ ಇಳಿದು ಬಳಿಕ ಮತ್ತೊಂದು ರೈಲು ಹತ್ತಿ ತೆರಳಬಹುದಾಗಿದೆ.