ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾಕ್ ಸರ್ಕಾರ ರಾಷ್ಟ್ರೀಯ ಭದ್ರತೆಯ ಕಾರಣದಿಂದ ಸಾಮಾಜಿಕ ಜಾಲತಾಣ ಟೆಲಿಗ್ರಾಮ್ ಅನ್ನು ನಿಷೇಧಿಸಿದೆ.
ಟೆಲಿಗ್ರಾಮ್ ಉಲ್ಲಂಘಿಸುತ್ತಿರುವ ನಾಗರಿಕರ ವೈಯಕ್ತಿಕ ದತ್ತಾಂಶಗಳನ್ನು ರಕ್ಷಿಸುವ ಸಲುವಾಗಿ ನಿಷೇಧಿಸಲಾಗಿದೆ ಎಂದು ಹೇಳಿದೆ.
ಸರ್ಕಾರಿ ಸಂಸ್ಥೆ ಹಾಗೂ ಬಳಕೆದಾರರ ಮಾಹಿತಿ ಸೋರಿಕೆ ಬಯಸಿ ಟೆಲಿಗ್ರಾಮ್ ಅನ್ನು ಹಲವು ಬಾರಿ ಸಂಪರ್ಕಿಸಲಾಯಿತಾದರೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಇದು ಸಮಾಜದ ಶಾಂತಿ ಹಾಗೂ ರಾಷ್ಟ್ರೀಯ ಭದ್ರತೆ ದೃಷ್ಠಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಇರಾಕ್ ಹೇಳಿದೆ.
ಇರಾಕ್ನಲ್ಲಿ ಟೆಲಿಗ್ರಾಮ್ ಭಾರಿ ಪ್ರಸಿದ್ಧಿ ಪಡೆದಿದ್ದು, ಇದರ ಗುಂಪುಗಳನ್ನು ರಚಿಸುವ ಮೂಲಕ ಇರಾನ್ ಪರವಾದ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.