ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ ಸಂಸದರ ಐಫೋನ್ಗಳನ್ನು (iPhone) ಹ್ಯಾಕ್ ಮಾಡಿ ಕದ್ದಾಲಿಕೆ ಮಾಡುತ್ತಿದೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಆಪಲ್ (Apple) ಕಂಪನಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
ರಾಜ್ಯ ಪ್ರಾಯೋಜಿತ ದಾಳಿ ಕಾಲಾನಂತರದಲ್ಲಿ ವಿಕಸನಗೊಳ್ಳುತ್ತದೆ. ಈ ದಾಳಿಗಳನ್ನು ಪತ್ತೆಹಚ್ಚುವುದು ಕಷ್ಟ. ಅಪೂರ್ಣವಾಗಿರುವ ಬೆದರಿಕೆ ಗುಪ್ತಚರ ಸಂಕೇತಗಳ ಮೇಲೆ ಅವಲಂಬಿತವಾಗಿದೆ. ಆಪಲ್ನ ಕೆಲವೊಂದು ಬೆದರಿಕೆ ಸೂಚನೆಗಳು ತಪ್ಪು ಅಲಾರಂಗಳಾಗಿರಬಹುದು. ಈ ದಾಳಿಗಳು ಪತ್ತೆಯಾಗದಿರುವ ಸಾಧ್ಯತೆಯಿದೆ. ಈ ದಾಳಿಗಳನ್ನು ಪತ್ತೆಹಚ್ಚಲು ಸಾಧ್ಯವಿಲ್ಲ. ನಾವು ಬೆದರಿಕೆ ಅಧಿಸೂಚನೆಗಳನ್ನು ನೀಡಲು ಕಾರಣವೇನು ಎಂಬುದರ ಕುರಿತು ಮಾಹಿತಿಯನ್ನು ಒದಗಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದೆ.
ಮಾಧ್ಯಮಗಳಲ್ಲಿ ಬಂದಿರುವ ಮಾಹಿತಿ ಪ್ರಕಾರ ಸುಮಾರು 150 ದೇಶಗಳ ವ್ಯಕ್ತಿಗಳಿಗೆ ನೋಟಿಫಿಕೇಶನ್ ಹೋಗಿದೆ. ಉಗಾಂಡದ ರಾಜಕೀಯ ನಾಯಕರ ಐಫೋನಿಗೆ ಈ ರೀತಿಯ ಎಚ್ಚರಿಕೆ ಸಂದೇಶ ಬಂದಿದೆ.
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಶಿವಸೇನಾದ (ಉದ್ಧವ್ ಬಣ) ಪ್ರಿಯಾಂಕಾ ಚತುರ್ವೇದಿ ಅವರು ತಮ್ಮ ಐ-ಫೋನ್ಗಳ ಮೇಲೆ ಸರ್ಕಾರಿ ಪ್ರಾಯೋಜಿತ ದಾಳಿಕೋರರು ಟಾರ್ಗೆಟ್ ಮಾಡುತ್ತಿರಬಹುದು ಎಂದು ಆಪಲ್ ಕಂಪೆನಿಯಿಂದ ಫೋನ್ ಹಾಗೂ ಇ-ಮೇಲ್ಗಳಿಗೆ ಎಚ್ಚರಿಕೆ ಸಂದೇಶ ಬಂದಿರುವುದಾಗಿ ಹೇಳಿದ್ದಾರೆ.
ಆಪಲ್ನಿಂದ ಬಂದ ಸಂದೇಶದಲ್ಲಿ ಏನಿದೆ?
ನೀವು ಸರ್ಕಾರಿ ಪ್ರಾಯೋಜಿತ ದಾಳಿಕೋರರಿಂದ ಗುರಿಯಾಗುತ್ತಿದ್ದೀರಿ. ಅವರು ನಿಮ್ಮ ಆಪಲ್ ಐಡಿಗೆ ಸಂಬಂಧಿಸಿದ ಐಫೋನ್ಗೆ ದೂರದಿಂದ ಕದ್ದಾಲಿಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಪಲ್ನ ಸಂದೇಶ ಹೇಳಿದೆ.