ಫೇಸ್ಬುಕ್, ಇನ್ಸ್ಟಾಗ್ರಾಮ್ ಏಕಾಏಕಿ ಲಾಗೌಟ್: ಪಾಸ್​ವರ್ಡ್​ ಮರೆತವರಿಗೆ ಈಗ ಟೆನ್ಶನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಫೇಸ್​ಬುಕ್, ಇನ್ಸ್ಟಾಗ್ರಾಮ್ (Facebook And Instagram) ಸರ್ವರ್ ಡೌನ್ ಆಗಿದ್ದು, ಜಗತಿನಾದ್ಯಂತ ಏಕಾಏಕಿ ಖಾತೆಗಳು ಲಾಗೌಟ್ ಆಗಿವೆ.

ಏಕಾಏಕಿ ಫೇಸ್‌ಬುಕ್, ಇನ್‌ಸ್ಟಾಗ್ರಾಂ ಹಾಗೂ ಥ್ರೆಡ್ಸ್ ಲಾಗ್ ಔಟ್ ಆಗಿದೆ. ಬಳಿಕ ಹೊಸ ಪಾಸ್‌ವರ್ಡ್ ಸಹಿತಿ ಏನೇ ಮಾಡಿದರೂ ಲಾಗಿನ್ ಆಗಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಟ್ವಿಟರ್ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮದಲ್ಲಿ ಬಳಕೆದಾರರು ಅಳಲು ತೋಡಿಕೊಂಡಿದ್ದಾರೆ. ಇನ್ನು ಫೇಸ್ಬುಕ್​ ಪಾಸ್​ವರ್ಡ್​ ಮರೆತವರು ಪುನಃ ಲಾಗಿನ್ ಆಗುವುದಕ್ಕೆ ಪರದಾಡುವಂತಾಗಿದೆ.

ಭಾರತ ಮಾತ್ರವಲ್ಲ ಹಲವು ದೇಶಗಳಲ್ಲಿ ಮೆಟಾ ಸೇವೆ ತಾತ್ಕಾಲಿಕ ಸ್ಥಗಿತಗೊಂಡಿದೆ. ಡೌನ್ ಡಿಟೆಕ್ಟರ್ ಡಾಟ್ ಕಾಮ್ ತಾಂತ್ರಿಕ ಸಮಸ್ಯೆ ಕುರಿತು ಮಾಹಿತಿ ನೀಡಿದೆ. ಮೆಟಾದ ಕೆಲ ಸೇವೆಗಳು ಸ್ಥಗಿತಗೊಂಡಿದೆ. ತಾಂತ್ರಿಕ ಸಮಸ್ಯೆಯಿಂದ ಬಳಕೆದಾರರು ಲಾಗಿನ್ ಆಗಲು ಸಾಧ್ಯವಾಗುತ್ತಿಲ್ಲ ಅನ್ನೋ ಮಾಹಿತಿಯನ್ನು ನೀಡಿದೆ.

ಏಕಾಏಕಿ ಖಾತೆಗಳು ಲಾಗೌಟ್ ಆಗಿರುವುದು ಏಕೆ? ಎನ್ನುವುದು ಬಳಕೆದಾರರ ಪ್ರಶ್ನೆಯಾಗಿದೆ. ತನ್ನಷ್ಟಕ್ಕೆ ತಾನೇ ಲಗೌಟ್ ಆಗಿದ್ದರಿಂದ ಪಾಸ್​ವರ್ಡ್​ ಮರೆತವರು ಮತ್ತು ಬೇರೆಯವರ ಕಡೆಯಿಂದ ಫೇಸ್ಬುಕ್ ಖಾತೆ ಸೃಷ್ಟಿಸಿಕೊಂಡವರಿಗೆ ಮತ್ತೆ ಲಾಗಿನ್ ಆಗುವುದು ಹೇಗೆ ಎನ್ನುವ ಚಿಂತೆ ಕಾಡತೊಡಗಿದೆ.

ಫೇಸ್‌ಬುಕ್ ಡೌನ್ ಕುರಿತು ಮೆಟಾ ಅಧಿಕೃತವಾಗಿ ಯಾವುದೇ ಸ್ಪಷ್ಟನೆ ನೀಡಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!