FACT | ಆಲೂಗಡ್ಡೆ ಸೇವನೆಯಿಂದ ಆರೋಗ್ಯಕ್ಕೆ ಸಿಗುವ ಲಾಭವೇನು? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಆಲೂಗಡ್ಡೆ ಇಷ್ಟ ಪಡದವರು ಯಾರೂ ಇಲ್ಲವೇನೋ? ಇದರಿಂದ ಹಲವು ರೀತಿಯ ತಿಂಡಿ, ತಿನಿಸುಗಳನ್ನು ತಯಾರಿಸಬಹುದು. ಆಲೂಗಡ್ಡೆ ಸಿಪ್ಪೆಯಲ್ಲಿ ವಿಟಮಿನ್ ಸಿ ಹೆಚ್ಚಾಗಿ ಇರುವ ಕಾರಣ ಜೀವಸತ್ವದ ಕೊರತೆಯಿಂದ ಬಳಲುತ್ತಿದ್ದರೆ ಆಲೂಗಡ್ಡೆಯನ್ನು ಸಿಪ್ಪೆ ಸಹಿತ ತಿನ್ನುವುದು ಒಳ್ಳೆಯದು. ವಿಟಮಿನ್ ಡಿ ಹಾಗೂ ಕ್ಯಾಲ್ಸಿಯಂ ಪ್ರಮಾಣ ಹೆಚ್ಚಿದ್ದು ಇದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ಆಲೂಗಡ್ಡೆಯಲ್ಲಿ ಫೈಬರ್ ಸಮೃದ್ಧವಾಗಿದೆ, ಇದು ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಆಲೂಗಡ್ಡೆಯಲ್ಲಿರುವ ವಿಟಮಿನ್ ಬಿ6 ಮೆದುಳಿನ ಕಾರ್ಯ ಮತ್ತು ಸ್ಮರಣೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಆಲೂಗೆಡ್ಡೆ ಫೇಸ್ ಮಾಸ್ಕ್ ಕೂಡ ಮುಖದ ಅಂದವನ್ನು ಹೆಚ್ಚಿಸಲು ಬಳಸುತ್ತಾರೆ. ಆಲೂಗಡ್ಡೆ ಮತ್ತು ಅರಿಶಿನದೊಂದಿಗೆ ಫೇಸ್ ಮಾಸ್ಕ್ ನಿಮ್ಮ ಚರ್ಮದ ಟೋನ್ ಅನ್ನು ಸುಧಾರಿಸುತ್ತದೆ.

ಆಲೂಗಡ್ಡೆಯನ್ನು ತುರಿ ಮಾಡಿ, ರಸಕ್ಕೆ ಚಿಟಿಕೆ ಅರಿಶಿನ ಪುಡಿಯನ್ನು ಸೇರಿಸಿ ಮತ್ತು ನಿಮ್ಮ ಮುಖಕ್ಕೆ ಹಚ್ಚಿ. ನಂತರ ಅರ್ಧ ಗಂಟೆ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ವಾರಕ್ಕೊಮ್ಮೆ ಇದನ್ನು ಮಾಡಿ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!