ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿಯಾಗಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಏಕನಾಥ್ ಶಿಂಧೆ ಅವರು ಗೃಹ ಮತ್ತು ನಗರಾಭಿವೃದ್ಧಿ ಇಲಾಖೆಗಳಿಗೆ ಬೇಡಿಕೆಯಿಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ವರದಿಗಳ ಪ್ರಕಾರ, ಎಲ್ಲವೂ ಅಂದುಕೊಂಡಂತೆ ನಡೆದರೆ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ನೇತೃತ್ವದಲ್ಲಿ ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಹೆಸರು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.
ಗುರುವಾರ ರಾತ್ರಿ ದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಮಹಾಯುತಿ ನಾಯಕರ ಮಹತ್ವದ ಸಭೆ ನಡೆಯಿತು. ಮಹಾರಾಷ್ಟ್ರದ ನಿಯೋಜಿತ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಅಜಿತ್ ಪವಾರ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮೊದಲಾದ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.