ಭಾರತೀಯ ಸೇನಾ ಪರೀಕ್ಷೆಯಲ್ಲಿ ಫೇಲ್: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ಸೇನಾ ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾರ್ತಿಕ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ.

ನಾನು ಭಾರತೀಯ ಸೇನೆಯ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದೆ. ಈ ವಿಚಾರವನ್ನು ಮನೆಯವರಿಗೆ ಹೇಳುವ ಧೈರ್ಯ ನನಗಿಲ್ಲ. ಎಂದು ಡೆತ್ ನೋಟ್ ಬರೆದು ಬಳಿಕ ಕಾರ್ತಿಕ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕಾರ್ತಿಕ್ ಎರಡು ವರ್ಷಗಳಿಂದ ಸೇನೆಗೆ ಸೇರಲು ಪ್ರಯತ್ನಿಸುತ್ತಲೇ ಇದ್ದ. ಪರೀಕ್ಷೆಯ ಫಲಿತಾಂಶ ಬಂದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಘಟನೆ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!