ನೀಟ್‌ ಪರೀಕ್ಷೆಯಲ್ಲಿ ಅನುತ್ತೀರ್ಣ: ಆತ್ಮಹತ್ಯೆಗೆ ಶರಣಾದ ಬಾಲಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ (NEET) ಉತ್ತೀರ್ಣರಾಗಲು ವಿಫಲಳಾದ ಕಾರಣ 19 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಮಿಳುನಾಡಿನ ಚೆನ್ನೈನ ಅಂಬತ್ತೂರಿನಲ್ಲಿ ಈ ಘಟನೆ ನಡೆದಿದೆ.

2022 ರ ನೀಟ್‌ ಪರೀಕ್ಷೆಗಳ ಫಲಿತಾಂಶವನ್ನು ಸೆಪ್ಟೆಂಬರ್ 7 ರಂದು ಬುಧವಾರ ಪ್ರಕಟಿಸಲಾಗಿದೆ. ಫಲಿತಾಂಶ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಘಟನೆಯ ಬಗ್ಗೆ ತಿಳಿದ ನಂತರ, ಹುಡುಗಿಯ ಮನೆಯವರು ಅವಳನ್ನು ಚೆನ್ನೈನ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದರು ಆದರೆ ಆಕೆಯನ್ನು ಸತ್ತಿದ್ದಾಳೆ ಎಂದು ಘೋಷಿಸಲಾಯಿತು. ಪೊಲೀಸರು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ತಮಿಳುನಾಡಿನಲ್ಲಿ ನೀಟ್‌ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಇದೇ ಮೊದಲಲ್ಲ. ಜುಲೈನಲ್ಲಿ, ಪರೀಕ್ಷೆಗೆ ಒಂದು ದಿನ ಮೊದಲು, ತಮಿಳುನಾಡಿನ ಅರಿಯಲೂರಿನಲ್ಲಿ ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಳು ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ತಾನು ಈ ಕ್ರಮ ಕೈಗೊಂಡಿದ್ದೇನೆ ಎಂದು ಬಾಲಕಿ ಬರೆದಿರುವ ಪತ್ರ ಪೊಲೀಸರಿಗೆ ಸಿಕ್ಕಿದೆ ಎಂದು ವರದಿಗಳಾಗಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!