ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಯಷ್ಟು ಕ್ಷೇತ್ರಗಳನ್ನು ಗೆಲ್ಲುವಲ್ಲಿ ವಿಫಲವಾಗಿದೆ. ಚುನಾವಣೆಯಲ್ಲಿ ಎರಡಂಕಿಯ ಮತದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು ಮಾತ್ರ ಗೆದ್ದಿದೆ.
ಪತ್ನಿ, ಪುತ್ರ ಹಾಗೂ ಸಂಬಂಧಿಕರೇ ಸ್ಪರ್ಧಿಸಿದ್ದರೂ ಅವರಿಗೆ ಲೀಡ್ ಕೊಡಿಸಲು ಸಚಿವರಿಗೆ ಸಾಧ್ಯವಾಗಿಲ್ಲ. ಈ ಬಗ್ಗೆ ಹೈಕಮಾಂಡ್ ತಲೆ ಕೆಡಿಸಿಕೊಂಡಿದ್ದು, ರಾಜ್ಯ ಸಚಿವರ ಮೇಲೆ ಹೈಕಮಾಂಡ್ ಗರಂ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭೇಟಿಗೆ ಬರುವ ಶಾಸಕರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.
‘ನಿಮ್ಮ ಕ್ಷೇತ್ರದಲ್ಲಿ ಎಷ್ಟು ಲೀಡ್ ಬಂದಿದೆ’ ಎಂದು ಭೇಟಿ ನೀಡಿದ ಸಂಸದರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮತಗಳ ಅಂತರ ಕಡಿಮೆಯಾದರೆ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸ್ವಾಭಾವಿಕವಾಗಿ, ಇದು ಶಾಸಕರಲ್ಲಿ ಆತಂಕ ಶುರುವಾಗಿದೆ.