ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‍ವಾಲ್ ಅವರ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿರುವ ಘಟನೆ ಬೆಳಕಿಗೆ ಬಂದಿದೆ.
ಆಗಂತುಕರು ಅವರ ನಕಲಿ ಖಾತೆ ಸೃಷ್ಟಿಸಿರುವುದು ಮಾತ್ರವಲ್ಲದೆ, ಆ ಖಾತೆಯ ಮೂಲಕ ವ್ಯವಹಾರ ನಡೆಸುತ್ತಿರುವುದು ಕೂಡಾ ಬೆಳಕಿಗೆ ಬಂದಿದೆ. ಈ ಬಗ್ಗೆ ಖುದ್ದು ಕಮಿಷನರ್ ಅನುಪಮ್ ಪ್ರಕರಣ ದಾಖಲಿಸಿಕೊಂಡಿದ್ದು, ಈ ಖಾತೆ ಮೂಲಕ ಯಾವುದೇ ವ್ಯವಹಾರ ಮಾಡದಂತೆ ಮನವಿ ಮಾಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಲೇ ಅಲರ್ಟ್ ಆಗಿರುವ ಸೈಬರ್ ಪೊಲೀಸರು ಆಗಂತುಕ ಕಿಡಿಗೇಡಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.