ಸಂಸದ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಫೇಕ್‌ ಅಕೌಂಟ್‌: ದುಡ್ಡಿಗೆ ಡಿಮ್ಯಾಂಡ್‌

ಹೊಸದಿಗಂತ ವರದಿ ಮಂಗಳೂರು:

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು, ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸದ ಪೂಜಾರಿ ಅವರ ಫೋಟೋವನ್ನು ದುರುಪಯೋಗಪಡಿಸಿಕೊಂಡು, ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್​ನಲ್ಲಿ ನಕಲಿ ಖಾತೆ ತೆರೆಯಲಾಗಿದೆ. ಅದರ ಮೂಲಕ ಸಾರ್ವಜನಿಕರಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂದು ದೂರಲಾಗಿದೆ.

ದುರುದ್ದೇಶಪೂರ್ವಕವಾಗಿ ಅಕ್ರಮ ಹಣ ಸಂಪಾದಿಸುವ ಹಾಗೂ ಹೆಸರು ಕೆಡಿಸುವ ಉದ್ದೇಶದಿಂದ ನಕಲಿ ಖಾತೆ ಸೃಷ್ಟಿಸಲಾಗಿದೆ. ಸಂಸದರ ಹೆಸರಿನಲ್ಲಿ ನಕಲಿ ಖಾತೆ ತೆರೆದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಕೀಲ ಶ್ಯಾಮಸುಂದರ ನಾಯರಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ. ಸೆನ್ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!