ಲಂಕಾಗೆ ಭಾರತ ಸೇನಾಪಡೆ ಕಳುಹಿಸುವ ವರದಿಗಳು ಶುದ್ಧ ಸುಳ್ಳು: ಹೈಕಮಿಷನ್‌ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಭೀಕರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ಹಿಂಸಾಚಾರದ ದಳ್ಳುರಿಯಲ್ಲಿ ಬೇಯುತ್ತಿರುವ ಶ್ರೀಲಂಕಾದ ಕೊಲಂಬೋ  ಸಹಾಯಕ್ಕೆ ಭಾರತವು ತನ್ನ ಸೇನಾಪಡೆ ಕಳುಹಿಸಲಿದೆ ಎಂಬ ವಿಚಾರದ ಕುರಿತಾಗಿ ಮಾಧ್ಯಮಗಳು, ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ವರದಿಯನ್ನು ಶ್ರೀಲಂಕಾದಲ್ಲಿನ ಭಾರತೀಯ ಹೈಕಮಿಷನರ್‌ ಕಚೇರಿ ತಳ್ಳಿಹಾಕಿದೆ.
ಶ್ರೀಲಂಕಾದ ಪ್ರಜಾಪ್ರಭುತ್ವ, ಸ್ಥಿರತೆ ಮತ್ತು ಆರ್ಥಿಕ ಚೇತರಿಕೆಗೆ ಭಾರತವು ಸಂಪೂರ್ಣ ಬೆಂಬಲ ನೀಡುತ್ತಿದೆ. ಆದರೆ ದ್ವೀಪರಾಷ್ಟ್ರಕ್ಕೆ ಸೇನಾಪಡೆ ಕಳುಹಿಸುವ ಕುರಿತಾದ ವರದಿಗಳು ಸಂಪೂರ್ಣ ಊಹಾಪೋಹ. ಆ ವರದಿಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಟ್ವಿಟ್‌ ಮೂಲಕ ಸ್ಪಷ್ಟಪಡಿಸಿದೆ.

ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಅವರ ಕುಟುಂಬ ಸದಸ್ಯರು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂಬ ಸ್ಥಳೀಯ ಸಾಮಾಜಿಕ ಮಾಧ್ಯಮಗಳ ವರದಿಗಳೂ ಸಂಪೂರ್ಣವಾಗಿ ಸುಳ್ಳು ಮತ್ತು ನಕಲಿ ಎಂದು ಸಹ ಭಾರತೀಯ ಹೈಕಮಿಷನ್‌ ನಿರಾಕರಿಸಿದೆ.
ಸೋಮವಾರ ರಾಜೀನಾಮೆ ನೀಡಿದ ನಂತರ ಮಹಿಂದಾ ರಾಜಪಕ್ಸೆ ಭಾರತಕ್ಕೆ ಓಡಿಬಂದ ಊಹಾಪೋಹಗಳು ಕೇಳಿಬಂದಿದ್ದವು. ಮಹಿಂದ ಅವರು ತಮ್ಮ ಕಚೇರಿ-ಅಧಿಕೃತ ನಿವಾಸವಾದ ಟೆಂಪಲ್ ಟ್ರೀಸ್ ತೊರೆದಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!